News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಪ್ರಕೃತಿ ಸಂರಕ್ಷಕ ಕಲ್ಮನೆ ಕಾಮೇಗೌಡ ನಿಧನಕ್ಕೆ ಗಣ್ಯರ ಸಂತಾಪ

ಬೆಂಗಳೂರು: ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕು ದಾಸನದೊಡ್ಡಿ ಗ್ರಾಮದ ಕುಂದನಿ ಬೆಟ್ಟದ ಮೇಲೆ 15 ಕಟ್ಟೆ ಕಟ್ಟಿ ಪ್ರಸಿದ್ಧಿ ಪಡೆದಿದ್ದ ಪ್ರಕೃತಿ ಸಂರಕ್ಷಕ ಕಲ್ಮನೆ ಕಾಮೇಗೌಡ ಅವರ ನಿಧನಕ್ಕೆ ಬಿಜೆಪಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದು, ಮೃತರ ಆತ್ಮಕ್ಕೆ ಶಾಂತಿ ಕೋರಿದ್ದಾರೆ.

ಕುರಿಗಾಹಿಯಾಗಿದ್ದ ಅವರು ಕುರಿ ಮಾರಿ ಸಂಪಾದಿಸಿದ ಹಣದಲ್ಲಿ ಬೆಟ್ಟದ ಮೇಲೆ ಕಟ್ಟೆಗಳನ್ನು ತೋಡಿಸಿದ್ದರು. ಪ್ರತಿ ಕಟ್ಟೆಗೂ ದೇವರು ಹಾಗೂ ಮೊಮ್ಮಕ್ಕಳ ಹೆಸರು ಇಟ್ಟಿದ್ದರು. ಹಲವು ವರ್ಷಗಳಿಂದಲೂ ಕಟ್ಟೆಗಳನ್ನು ಸಂರಕ್ಷಿಸಿ ಬೆಟ್ಟದ ತಟದಲ್ಲಿ ಹಸಿರು ಪರಿಸರ ಇರುವಂತೆ ನೋಡಿಕೊಂಡಿದ್ದರು. ಬೆಟ್ಟದ ಮೇಲ್ಭಾಗ ಹಾಗೂ ತಟದಲ್ಲಿ ನೂರಾರು ಸಸಿ ನೆಟ್ಟು ಬೆಳೆಸಿದ್ದರು.

ಕಾಮೇಗೌಡರ ಪ್ರಕೃತಿ ಸಂರಕ್ಷಣೆ ಪ್ರಧಾನಿ ನರೇಂದ್ರ ಮೋದಿ ಅವರ ಗಮನ ಸೆಳೆದಿತ್ತು, ‘ಮನ್ ಕಿ ಬಾತ್’ ಸರಣಿಯಲ್ಲಿ ಕಾಮೇಗೌಡರ ಸೇವೆಯನ್ನು ಕೊಂಡಾಡಿದ್ದರು ಎಂದು ಗಮನ ಸೆಳೆದಿದ್ದಾರೆ.

ರಾಷ್ಟ್ರಮಟ್ಟದಲ್ಲಿ ಹಲವು ನಾಯಕರು ಅವರ ಸೇವೆಯನ್ನು ಹೊಗಳಿದ್ದರು. ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್ ಕೂಡ ಅವರ ಸೇವೆಯನ್ನು ಉಲ್ಲೇಖಿಸಿ ಟ್ವೀಟ್ ಮಾಡಿದ್ದರು. ಅವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ, ರಮಾಗೋವಿಂದ ಪ್ರಶಸ್ತಿ ಸೇರಿದಂತೆ ಹಲವು ಪ್ರತಿಷ್ಠಿತ ಪ್ರಶಸ್ತಿಗಳು ಸಂದಿದ್ದವು ಎಂದು ತಿಳಿಸಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top