ಶ್ರೀನಗರ: ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಹರ್ಮೆನ್ ಪ್ರದೇಶದಲ್ಲಿ ಮಂಗಳವಾರ ನಡೆದ ಗ್ರೆನೇಡ್ ದಾಳಿಯಲ್ಲಿ ಇಬ್ಬರು ವಲಸೆ ಕಾರ್ಮಿಕರು ಸಾವನ್ನಪ್ಪಿದ್ದಾರೆ. ಶೋಪಿಯಾನ್ನಲ್ಲಿ ಇಬ್ಬರು ವಲಸೆ ಕಾರ್ಮಿಕರ ಹತ್ಯೆಗೆ ಕಾರಣವಾದ ಹೈಬ್ರಿಡ್ ಲಷ್ಕರ್ ಭಯೋತ್ಪಾದಕನನ್ನು ದಾಳಿಯ ನಂತರ ಕೆಲವೇ ಗಂಟೆಗಳಲ್ಲಿ ಬಂಧಿಸಲಾಗಿದೆ.
ಬಂಧಿತ ಹರ್ಮೈನ್ ಶೋಪಿಯಾನ್ನ ನಿವಾಸಿ ಇಮ್ರಾನ್ ಗನಿ ಎಂದು ಗುರುತಿಸಲಾಗಿದೆ.
ಬಾಡಿಗೆ ನಿವಾಸದಲ್ಲಿದ್ದವಲಸಿಗ ಕಾರ್ಮಿಕರ ಮೇಲೆ ಗ್ರೆನೇಡ್ ದಾಳಿ ನಡೆಸಲಾಗಿದೆ. ವಿಚಾರಣೆ ವೇಳೆ ಬಂಧಿತ ಕಾರ್ಮಿಕರ ಮೇಲೆ ಗ್ರೆನೇಡ್ ಎಸೆದಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸ್ ಎಡಿಜಿಪಿ ವಿಜಯ್ ಕುಮಾರ್ ತಿಳಿಸಿದ್ದಾರೆ.
ಎರಡು ದಿನಗಳ ಹಿಂದೆ, ಶೋಪಿಯಾನ್ನ ಚೌದ್ರಿ ಗುಂಡ್ ಗ್ರಾಮದಲ್ಲಿ ಕಾಶ್ಮೀರಿ ಪಂಡಿತ್ ಪುರಾಣ ಕ್ರಿಶನ್ ಭಟ್ ಎಂಬಾತನನ್ನು ಭಯೋತ್ಪಾದಕರು ಗುಂಡಿಕ್ಕಿ ಕೊಂದಿದ್ದರು.
Hybrid #terrorist of proscribed #terror outfit LeT Imran Bashir Ganie of Harmen #Shopian who lobbed grenade #arrested by Shopian police. Further #investigation and raids are going on: ADGP Kashmir@JmuKmrPolice https://t.co/nP8xixR8GG
— Kashmir Zone Police (@KashmirPolice) October 17, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.