News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಬಿಸಿಸಿಐನ 36ನೇ ಅಧ್ಯಕ್ಷರಾಗಿ ರೋಜರ್ ಬಿನ್ನಿ ನೇಮಕ

ನವದೆಹಲಿ: 1983ರ ವಿಶ್ವಕಪ್ ವಿಜೇತ ಭಾರತೀಯ ಕ್ರಿಕೆಟ್ ತಂಡದ ಸದಸ್ಯರಾಗಿದ್ದ ರೋಜರ್ ಬಿನ್ನಿ ಮಂಗಳವಾರ ಬಿಸಿಸಿಐನ 36ನೇ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.

ವರದಿಯ ಪ್ರಕಾರ, ಮುಂಬೈನಲ್ಲಿ ನಡೆದ ಬಿಸಿಸಿಐ ವಾರ್ಷಿಕ ಸಾಮಾನು ಸಭೆಯಲ್ಲಿ ಈ ನೇಮಕಾತಿಯನ್ನು ಘೋಷಿಸಲಾಗಿದೆ.

ಭಾರತದ ಮಾಜಿ ಕ್ರಿಕೆಟಿಗ ಸೌರವ್ ಗಂಗೂಲಿ ಅವರ ನಂತರ ಬಿಸಿಸಿಐ ಚುಕ್ಕಾಣಿ ರೋಜರ್‌ ಬಿನ್ನಿ ಅವರ ಪಾಲಾಗಿದೆ. ಅಧ್ಯಕ್ಷ ಸ್ಥಾನಕ್ಕೆ ಬಿನ್ನಿ ಮಾತ್ರ ನಾಮಪತ್ರ ಸಲ್ಲಿಸಿದ್ದರು.

ಬಿನ್ನಿ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷರಾಗಿದ್ದಾರೆ, ಬಿಸಿಸಿಐ ಅಧ್ಯಕ್ಷರಾದ ಕಾರಣ ತಮ್ಮ ಈ ಸ್ಥಾನವನ್ನು ತೊರೆಯಲಿದ್ದಾರೆ.

ಮುಂದಿನ ಪದಾಧಿಕಾರಿಗಳ ಆಯ್ಕೆಯೂ ಶೀಘ್ರ ನಡೆಯಲಿದೆ.

ಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಬಿಸಿಸಿಐ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕೆ ಅಥವಾ ಎರಡನೇ ಅವಧಿಗೆ ಗ್ರೆಗ್ ಬಾರ್ಕ್ಲೇ ಅವರನ್ನು ಬೆಂಬಲಿಸಬೇಕೆ ಎಂದು ಸದಸ್ಯರು ಚರ್ಚಿಸುತ್ತಾರೆ ಎನ್ನಲಾಗಿದೆ.

ICC ಉನ್ನತ ಹುದ್ದೆಗೆ ನಾಮನಿರ್ದೇಶನಗಳನ್ನು ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್ 20. ICC ಮಂಡಳಿಯು ನವೆಂಬರ್ 11-13 ರವರೆಗೆ ಮೆಲ್ಬೋರ್ನ್‌ನಲ್ಲಿ ಸಭೆ ಸೇರಲಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top