News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸಭೆ: ಮೋದಿ ಭಾಗಿ

ನವದೆಹಲಿ: ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸಭೆ ನಿನ್ನೆ ಸಂಜೆ ನವದೆಹಲಿಯ ಪಕ್ಷದ ಪ್ರಧಾನ ಕಚೇರಿಯಲ್ಲಿ ನಡೆಯಿತು. ಮುಂಬರುವ ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಹೆಸರನ್ನು ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, ಕೇಂದ್ರ ಸಚಿವ ಅಮಿತ್ ಶಾ ಮತ್ತು ಇತರ ಹಿರಿಯ ನಾಯಕರು ಸಭೆಯಲ್ಲಿ ಭಾಗವಹಿಸಿದ್ದರು.

ಹಿಮಾಚಲದಲ್ಲಿ ಮುಂದಿನ ತಿಂಗಳು 12 ರಂದು ವಿಧಾನಸಭಾ ಚುನಾವಣೆ ನಡೆಯಲಿದೆ.

68 ಸದಸ್ಯ ಬಲದ ಹಿಮಾಚಲ ಪ್ರದೇಶ ವಿಧಾನಸಭೆಗೆ ಬಿಜೆಪಿ ತನ್ನ 62 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಇಂದು ಬಿಡುಗಡೆ ಮಾಡಿದೆ. ಪಕ್ಷವು ಸೇರಾಜ್ ವಿಧಾನಸಭಾ ಕ್ಷೇತ್ರದಿಂದ ಮುಖ್ಯಮಂತ್ರಿ ಜೈ ರಾಮ್ ಠಾಕೂರ್ ಅವರನ್ನು ಕಣಕ್ಕಿಳಿಸಿದೆ. ಪಕ್ಷವು ಕ್ಯಾಬಿನೆಟ್ ಸಚಿವ ಸೇರಿದಂತೆ 11 ಹಾಲಿ ಶಾಸಕರನ್ನು ಕೈಬಿಟ್ಟಿದೆ

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top