News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಕಾಂಗ್ರೆಸ್‌ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆ

ನವದೆಹಲಿ: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಒಟ್ಟು 9,385 ಮತಗಳ ಪೈಕಿ 7,897 ಮತಗಳನ್ನು ಪಡೆಯುವ ಮೂಲಕ ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ಭರ್ಜರಿ ಜಯಗಳಿಸಿದ್ದಾರೆ, ಆದರೆ ಅವರ ಎದುರಾಳಿ ಶಶಿ ತರೂರ್ ಕೇವಲ 1,072 ಮತಗಳನ್ನು ಗಳಿಸಿ ಸೋಲನ್ನು ಒಪ್ಪಿಕೊಂಡಿದ್ದಾರೆ.

2019 ರ ಲೋಕಸಭಾ ಚುನಾವಣೆಯ ನಂತರ ರಾಹುಲ್ ಗಾಂಧಿ ಅವರು ಅಧಿಕಾರದಿಂದ ಕೆಳಗಿಳಿದ ನಂತರ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಸ್ಥಾನವನ್ನು ಖರ್ಗೆ ಅವರು ಅಲಂಕರಿಸಲು ಸಿದ್ಧರಾಗಿದ್ದಾರೆ. ಇದರೊಂದಿಗೆ ಖರ್ಗೆ ಅವರು ಎರಡು ದಶಕಗಳಲ್ಲಿನ ಮೊದಲ ಗಾಂಧಿಯೇತರ ಕಾಂಗ್ರೆಸ್ ಅಧ್ಯಕ್ಷರಾಗಲಿದ್ದಾರೆ.

ಇದಕ್ಕೂ ಮೊದಲು ಕಾಂಗ್ರೆಸ್ ಅಧ್ಯಕ್ಷೀಯ ಅಭ್ಯರ್ಥಿ ಶಶಿ ತರೂರ್‌  ಅವರು ಕಾಂಗ್ರೆಸ್ ಕೇಂದ್ರ ಚುನಾವಣಾ ಪ್ರಾಧಿಕಾರದ ಅಧ್ಯಕ್ಷ ಮಧುಸೂಧನ್ ಮಿಸ್ತ್ರಿ ಅವರಿಗೆ ಪತ್ರ ಬರೆದು, “ಯುಪಿಯಲ್ಲಿ ಚುನಾವಣಾ ನಡವಳಿಕೆಯಲ್ಲಿ ಅತ್ಯಂತ ಗಂಭೀರ ಅಕ್ರಮಗಳು ನಡೆದಿವೆ. ಹೀಗಾಗಿ ಯುಪಿಯ ಎಲ್ಲಾ ಮತಗಳನ್ನು ಅಸಿಂಧು ಎಂದು ಪರಿಗಣಿಸಬೇಕು” ಎಂದು ಒತ್ತಾಯಿಸಿದ್ದರು.

ಪಕ್ಷದ ಹಿರಿಯ ನಾಯಕ ಖರ್ಗೆ ಅವರನ್ನು ಗಾಂಧಿ ಕುಟುಂಬದ ‘ಅನಧಿಕೃತ ಅಭ್ಯರ್ಥಿ’ ಎಂದು ಪರಿಗಣಿಸಲಾಗಿದೆ. ಹೀಗಾಗಿಯೇ, ಹೆಚ್ಚಿನ ಸಂಖ್ಯೆಯ ಹಿರಿಯ ನಾಯಕರು ಅವರನ್ನು ಬೆಂಬಲಿಸಿದ್ದಾರೆ ಎನ್ನಲಾಗಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top