News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಕರ್ನಾಟಕದಲ್ಲಿ ಕಾರಿನ ಹಿಂಬದಿ ಪ್ರಯಾಣಿಕರಿಗೂ ಸೀಟ್‌ ಬೆಲ್ಟ್‌ ಕಡ್ಡಾಯ: ಇಲ್ಲದಿದ್ರೆ 1000 ರೂ. ದಂಡ

ಬೆಂಗಳೂರು: ಕಾರಿನಲ್ಲಿ ಪ್ರಯಾಣಿಸುವ ಹಿಂಬಂದಿ ಪ್ರಯಾಣಿಕರಿಗೂ ಸೀಟ್ ಬೆಲ್ಟ್ ಧರಿಸುವುದನ್ನು ಕಡ್ಡಾಯಗೊಳಿಸಿ‌ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ.

ನಾಲ್ಕು ಚಕ್ರದ ವಾಹನಗಳ ಚಾಲಕರು ಮತ್ತು ಸಹ ಪ್ರಯಾಣಿಕರು ಸುರಕ್ಷತಾ ಬೆಲ್ಟ್ ಧರಿಸಲು ವಿಫಲವಾದರೆ  1,000 ರೂ ದಂಡ ಪಾವತಿ ಮಾಡಬೇಕಾಗುತ್ತದೆ. ಹಿಂದೆ 500 ರೂ ಇದ್ದ ದಂಡವನ್ನು ಈಗ ಸಾವಿರಕ್ಕೆ ಹೆಚ್ಚಿಸಲಾಗಿದೆ. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಆದೇಶದ ನಂತರ ರಾಜ್ಯ ಪೊಲೀಸರು ಈ ನಿರ್ದೇಶನವನ್ನು ಹೊರಡಿಸಿದ್ದಾರೆ.

ಬುಧವಾರದಿಂದಲೇ ಈ ಆದೇಶ ಜಾರಿಗೆ ಬಂದಿದ್ದು, ರಾಜ್ಯದ ಎಲ್ಲಾ ಕಮಿಷನರೇಟ್‌ಗಳು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಇದನ್ನು ಜಾರಿಗೊಳಿಸಲು ಸೂಚಿಸಲಾಗಿದೆ.

“ಮೋಟಾರು ವಾಹನ ಕಾಯಿದೆ, 1998 ರ ಸೆಕ್ಷನ್ 1948 ಸುರಕ್ಷತಾ ಬೆಲ್ಟ್‌ಗಳ ಬಳಕೆಯನ್ನು ಕಡ್ಡಾಯಗೊಳಿಸುತ್ತದೆ. ಸೆಕ್ಷನ್ – 194 ಬಿ ಉಪ-ವಿಭಾಗ 1 ರ ಪ್ರಕಾರ, ‘ಸೀಟ್ ಬೆಲ್ಟ್ ಧರಿಸದೆ ಮೋಟಾರು ವಾಹನವನ್ನು ಓಡಿಸುವವರು ಅಥವಾ ಸುರಕ್ಷತಾ ಬೆಲ್ಟ್ ಧರಿಸದ ಪ್ರಯಾಣಿಕರನ್ನು ಕೊಂಡೊಯ್ಯುವವರು 1,000 ದಂಡದೊಂದಿಗೆ ಶಿಕ್ಷೆಗೆ ಗುರಿಯಾಗಬಹುದು” ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ತನ್ನ ಆದೇಶದಲ್ಲಿ ಉಲ್ಲೇಖಿಸಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top