ಕೆವಾಡಿಯಾ: ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರಸ್ ಅವರೊಂದಿಗೆ ಇಂದು ಗುಜರಾತ್‌ನ ಕೆವಾಡಿಯಾದಲ್ಲಿರುವ ಏಕತಾ ಪ್ರತಿಮೆ ಆವರಣದಲ್ಲಿ ದ್ವಿಪಕ್ಷೀಯ ಸಭೆ ನಡೆಸಿದರು.
ಗುಜರಾತಿಗೆ ಎರಡು ದಿನಗಳ ಭೇಟಿಯಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಕೆವಾಡಿಯಾದ ಏಕತಾ ನಗರದಲ್ಲಿರುವ ಏಕತಾ ಪ್ರತಿಮೆಯಲ್ಲಿ ಗುಟೆರಸ್ ಅವರ ಸಮ್ಮುಖದಲ್ಲಿ ಮಿಷನ್ ಲೈಫ್ (ಪರಿಸರಕ್ಕಾಗಿ ಜೀವನಶೈಲಿ) ಪ್ರಾರಂಭಿಸಲಿದ್ದಾರೆ.
ಮೂರು ದಿನಗಳ ಭಾರತ ಪ್ರವಾಸದಲ್ಲಿರುವ ಯುಎನ್ ಸೆಕ್ರೆಟರಿ ಜನರಲ್ ಆಂಟೋನಿಯೊ ಗುಟೆರಸ್ ಅವರು ಮೊಧೇರಾದಲ್ಲಿರುವ ದೇಶದ ಮೊದಲ ಸೌರಶಕ್ತಿ ಚಾಲಿತ ಗ್ರಾಮ ಮತ್ತು ಪ್ರದೇಶದ ಇತರ ಅಭಿವೃದ್ಧಿ ಯೋಜನೆಗಳಿಗೆ ಭೇಟಿ ನೀಡಲಿದ್ದಾರೆ. ಯುಎನ್ ಸೆಕ್ರೆಟರಿ ಜನರಲ್ ಅವರು ಮೊಧೇರಾದಲ್ಲಿರುವ ಸೂರ್ಯ ದೇವಾಲಯಕ್ಕೆ ಭೇಟಿ ನೀಡುತ್ತಾರೆ ಎಂದು ಮೂಲಗಳು ತಿಳಿಸಿವೆ.
ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಕೆವಾಡಿಯಾದಲ್ಲಿ ಅಕ್ಟೋಬರ್ 20 ರಿಂದ 22 ರವರೆಗೆ ಆಯೋಜಿಸಿರುವ 10 ನೇ ಮಿಷನ್ಸ್ ಮುಖ್ಯಸ್ಥರ ಸಮ್ಮೇಳನದಲ್ಲಿ ಪ್ರಧಾನ ಮಂತ್ರಿ ಭಾಗವಹಿಸಲಿದ್ದಾರೆ. ಸಮ್ಮೇಳನವು ಪ್ರಪಂಚದಾದ್ಯಂತದ 118 ಭಾರತೀಯ ಮಿಷನ್‌ಗಳ ಮುಖ್ಯಸ್ಥರನ್ನು (ರಾಯಭಾರಿಗಳು ಮತ್ತು ಹೈಕಮಿಷನರ್‌ಗಳು) ಒಟ್ಟುಗೂಡಿಸುತ್ತದೆ.
#WATCH | Gujarat: Prime Minister Narendra Modi meets António Guterres, Secretary-General of the United Nations, holds bilateral talks in Kevadia, Narmada District pic.twitter.com/ElJXQdHISW
— ANI (@ANI) October 20, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.