News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ದೈವ ನರ್ತಕರಿಗೆ ಮಾಸಿಕ 2,000 ರೂ ಮಾಸಾಶನ ಘೋಷಣೆ

ಬೆಂಗಳೂರು: ‘ಕಾಂತಾರ’ ಚಿತ್ರದ ಮೂಲಕ ದಕ್ಷಿಣ ಕನ್ನಡದ ದೈವಾರಾಧನೆಯ‌ ಮಹತ್ವ ಜಗತ್ತಿನ ಮೂಲೆ ಮೂಲೆಯನ್ನು ತಲುಪುತ್ತಿದೆ. ಈ ನಡುವೆಯೇ ದೈವ ನರ್ತಕರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿಯನ್ನು ನೀಡಿದೆ.

ದೈವ ನರ್ತನ ಮಾಡುತ್ತಿರುವ 60 ವರ್ಷ ತುಂಬಿದ ದೈವ ನರ್ತಕರಿಗೆ ಪ್ರತಿ ತಿಂಗಳು 2000 ರೂಪಾಯಿಗಳ ಮಸಾಶನ ನೀಡುವ ನಿರ್ಧಾರವನ್ನು ಘೋಷಿಸಿದೆ.

ಈ ಬಗ್ಗೆ ಮಾಹಿತಿ ನೀಡಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್ ಅವರು, “ದೈವ ನರ್ತನ ಮಾಡುವವರ ದೊಡ್ಡ ಸಂಖ್ಯೆಯೇ ಇದೆ. ಪ್ರತಿ ವರ್ಷ ದೈವಾರಾಧನೆ ಮಾಡಿಕೊಂಡೇ ತಮ್ಮ ಕಸುಬು ನಡೆಸುತ್ತಿರುವ ಜನರು ಇದ್ದಾರೆ. ಹೀಗಾಗಿ ದೈವ ನಟ್ಟನ ಮಾಡುತ್ತಿರುವ 60 ವರ್ಷ ಮೀರಿದವರಿಗೆ ಮಾಸಾಶನ ನೀಡುವ ನಿರ್ಧಾರವನ್ನು ನಮ್ಮ ಸರ್ಕಾರ ತೆಗೆದುಕೊಂಡಿದೆ. ಸಂಬಂಧಪಟ್ಟ ಜಿಲ್ಲೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಲ್ಲಿ ಅರ್ಜಿ ಸಲ್ಲಿಸಿದರೆ ಪ್ರತಿ ತಿಂಗಳು 2,000 ರೂಪಾಯಿಗಳ ಮಾಸಾಶನ ನೀಡಲಾಗುತ್ತದೆ” ಎಂದಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top