News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

16 ಲಕ್ಷ ದೀಪಗಳನ್ನು ಬೆಳಗಿಸಿ ದಾಖಲೆ ನಿರ್ಮಾಣಕ್ಕೆ ಸಜ್ಜಾಗಿದೆ ಅಯೋಧ್ಯೆ

ಲಕ್ನೋ: ಉತ್ತರ ಪ್ರದೇಶದ ಅವಧ್ ವಿಶ್ವವಿದ್ಯಾನಿಲಯದ ಸ್ವಯಂಸೇವಕರು ಅಯೋಧ್ಯೆಯ ರಾಮ್ ಕಿ ಪೈಡಿ ಘಾಟ್‌ಗಳಲ್ಲಿ 16 ಲಕ್ಷಕ್ಕೂ ಹೆಚ್ಚು ದೀಪಗಳನ್ನು ಬೆಳಗಿಸುವ ಮೂಲಕ ಅಯೋಧ್ಯೆಯಲ್ಲಿ ದೀಪಾವಳಿಯಂದು ಅತಿ ಹೆಚ್ಚು ದೀಪಗಳನ್ನು ಬೆಳಗಿಸಿದ ಹಿಂದಿನ ದಾಖಲೆಯನ್ನು ಮುರಿಯಲು ಸಜ್ಜಾಗಿದ್ದಾರೆ.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಎರಡನೇ ಅವಧಿಯ ಮೊದಲ ‘ದೀಪೋತ್ಸವ’ ಆಗಿರುವುದರಿಂದ ಅಯೋಧ್ಯೆಯಲ್ಲಿ ಈ ವರ್ಷದ ದೀಪಾವಳಿಯು ಅದ್ಧೂರಿಯಾಗಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಉಪಸ್ಥಿತರಿರಲಿದ್ದಾರೆ.

ಈ ವರ್ಷ ಎಂಟು ರಾಜ್ಯಗಳು ಮತ್ತು 10 ದೇಶಗಳ ಪ್ರತಿನಿಧಿಗಳು ರಾಮಲೀಲಾ ವೇಳೆ ಅಯೋಧ್ಯೆಯಲ್ಲಿ ಇರಲಿದ್ದಾರೆ. ಪಟಾಕಿ ಜತೆಗೆ 11 ಬಗೆಯ ಫ್ಲೋಟ್ ಗಳು ಇರುತ್ತವೆ. ಶ್ರೀರಾಮನ ಜೀವನಕ್ಕೆ ಸಂಬಂಧಿಸಿದ ದೃಶ್ಯಗಳನ್ನು ಲೇಸರ್ ಲೈಟ್ ಶೋ ಮೂಲಕ ಪ್ರದರ್ಶಿಸಲಾಗುತ್ತದೆ. ಶ್ರೀರಾಮನ ಪಾದದಲ್ಲಿ 16 ಲಕ್ಷಕ್ಕೂ ಹೆಚ್ಚು ದೀಪಗಳನ್ನು ಬೆಳಗಿಸುವ ವಿಶೇಷ ಕ್ಷಣ ಸಂಭವಿಸಲಿದೆ. ಅವಧ್ ವಿಶ್ವವಿದ್ಯಾಲಯದ ಸುಮಾರು 20,000 ಸ್ವಯಂಸೇವಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಕಳೆದ ಐದು ವರ್ಷಗಳಿಂದ, ಅಯೋಧ್ಯೆಯು ದೀಪೋತ್ಸವದಲ್ಲಿ ದಾಖಲೆ ಬರೆಯುತ್ತಿದೆ. 2021 ರಲ್ಲಿ ಏಕಕಾಲದಲ್ಲಿ 9.5 ಲಕ್ಷ ದೀಪಗಳನ್ನು ಬೆಳಗಿಸುವ ಗಿನ್ನಿಸ್ ದಾಖಲೆಯನ್ನು ಮಾಡಿತ್ತು.

ದೀಪೋತ್ಸವದ ನೋಡಲ್ ಅಧಿಕಾರಿ ಅಜಯ್ ಪ್ರತಾಪ್ ಸಿಂಗ್ ಮಾತನಾಡಿ, ಈ ದೀಪೋತ್ಸವದಲ್ಲಿ ಪ್ರವಾಸಿಗರು ಮತ್ತು ಭಕ್ತರಿಗೆ ‘ತ್ರೇತಾಯುಗದ ಅಯೋಧ್ಯೆ’ಯ ಅನುಭವವನ್ನು ನೀಡಲು ಪ್ರಯತ್ನಿಸುತ್ತೇವೆ ಎಂದು ಹೇಳಿದರು. ಮುಖ್ಯಮಂತ್ರಿ ಆದಿತ್ಯನಾಥ್ ಯೋಗಿ ಈ ಹಿಂದೆ ಅಯೋಧ್ಯೆಗೆ ಭೇಟಿ ನೀಡಿ ಸಿದ್ಧತೆಗಳನ್ನು ಪರಿಶೀಲಿಸಿದ್ದರು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top