ಬೆಂಗಳೂರು: 2023ರ ಮಾರ್ಚ್ನಲ್ಲಿ ನಡೆಯಲಿರುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿಯನ್ನು ಇಂದು ಪ್ರಕಟಿಸಲಾಗಿದೆ.
ಈ ಬಗ್ಗೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಸುತ್ತೋಲೆಯನ್ನು ಹೊರಡಿಸಿದ್ದು, 2023ರ ಮಾರ್ಚ್ 10 ರಿಂದ 29 ರವರೆಗೆ ಪರೀಕ್ಷೆಯನ್ನು ನಡೆಸಲು ತೀರ್ಮಾನಿಸಲಾಗಿದೆ ಎಂದಿದೆ.
ಅಲ್ಲದೇ, ಎಲ್ಲಾ ಕಾಲೇಜುಗಳ ಪ್ರಾಂಶುಪಾಲರುಗಳು ಕಾಲೇಜಿನ ಸೂಚನಾ ಫಲಕದಲ್ಲಿ ಕಡ್ಡಾಯವಾಗಿ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಿ ವಿದ್ಯಾರ್ಥಿಗಳಿಗೆ ಖುದ್ದಾಗಿ ಗಮನಿಸಲು ಸೂಚಿಸಬೇಕು ಎಂದು ತಿಳಿಸಿದೆ.
ಪೋಷಕರು ಮತ್ತು ವಿದ್ಯಾರ್ಥಿಗಳಿಗೆ ವೇಳಾಪಟ್ಟಿಯಲ್ಲಿ ಯಾವುದಾದರೂ ಆಕ್ಷೇಪನೆಗಳಿದ್ದರೆ ನವೆಂಬರ್ 21 ರೊಳಗೆ jdexam.dpue@gmail.com ಮೇಲ್ ಮಾಡಬಹುದು ಎಂದಿದೆ.
2023ರ ಮಾರ್ಚ್ನಲ್ಲಿ ನಡೆಯಲಿರುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.@BSBommai pic.twitter.com/pVBpV83P8s
— B.C Nagesh (@BCNagesh_bjp) October 21, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.