News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ʼಗಂಧದ ಗುಡಿʼ ಸಿನಿಮಾಗೆ ತೆರಿಗೆ ವಿನಾಯಿತಿ: ಸಿಎಂ ಘೋಷಣೆ

ಬೆಂಗಳೂರು: ದಿವಂಗತ ನಟ ಪುನೀತ್‌ ರಾಜ್‌ ಕುಮಾರ್‌ ಅವರ ನಟನೆಯ ʼಗಂಧದ ಗುಡಿʼ ಸಿನಿಮಾಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತೆರಿಗೆ ವಿನಾಯಿತಿಯನ್ನು ಘೋಷಣೆ ಮಾಡಿದ್ದಾರೆ. ಅಲ್ಲದೇ ಪುನೀತ್‌ ಅವರಿಗೆ ನವೆಂಬರ್‌ 1ರ ಕನ್ನಡ ರಾಜ್ಯೋತ್ಸವದಂದು ʼಕರ್ನಾಟಕ ರತ್ನʼ ಪುರಸ್ಕಾರ ಪ್ರದಾನಿಸುವುದಾಗಿ ತಿಳಿಸಿದ್ದಾರೆ.

ನಿನ್ನೆ ಸಂಜೆ ಬೆಂಗಳೂರಿನಲ್ಲಿ ನಡೆದ ʼಪುನೀತ ಪರ್ವʼ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ವೇಳೆ ಸಿಎಂ ಈ ಘೋಷಣೆಗಳನ್ನು ಮಾಡಿದ್ದಾರೆ

“ಮುಂದಿನ ಪೀಳಿಗೆಗೆ ನಿಸರ್ಗದ ಬಗ್ಗೆ ಜಾಗೃತಿ ಮೂಡಿಸುವ, ಅದರ ಸಂರಕ್ಷಣೆ ಮಾಡಲು ಪ್ರೇರಣೆ ನೀಡುವ ‘ಗಂಧದ ಗುಡಿ’ ಚಲನಚಿತ್ರಕ್ಕೆ ಸರ್ಕಾರ ತೆರಿಗೆ ವಿನಾಯಿತಿಯನ್ನು ಸರ್ಕಾರ ನೀಡಲಿದೆ” ಎಂದಿದ್ದಾರೆ.

 ‘ಗಂಧದ ಗುಡಿ’ ಚಲನಚಿತ್ರ ನಿಸರ್ಗ ಮತ್ತು ಅದರ ರಕ್ಷಣೆ ಕುರಿತಾಗಿರುವ ಚಲನಚಿತ್ರವಾಗಿದೆ. ಇಂದಿನ ಕಾಲದಲ್ಲಿ ನಿಸರ್ಗ ಸಂರಕ್ಷಣೆ ಕುರಿತು ಜಾಗೃತಿ ಮೂಡಿಸುವುದು ಅತ್ಯಂತ ಅವಶ್ಯಕತೆ ಇದೆ ಎಂದರು.

“ನವೆಂಬರ್ 1 ರಂದು ಅಪ್ಪುರವರಿಗೆ ಕರ್ನಾಟಕ ಶ್ರೇಷ್ಟ ಪ್ರಶಸ್ತಿಯಾಗಿರುವ ‘ಕರ್ನಾಟಕ ಪ್ರಶಸ್ತಿಯನ್ನು’ ಸರ್ಕಾರ ನೀಡುತ್ತಿದೆ. ವಿಧಾನಸೌಧದ ಮುಖ್ಯದ್ವಾರ ಮೆಟ್ಟಿಲುಗಳ ಮೇಲೆ ಮರಣೋತ್ತರವಾಗಿ ಕರ್ನಾಟಕ ಪ್ರಶಸ್ತಿ ನೀಡಿ ಗೌರವ ಸಲ್ಲಿಸಲಾಗುತ್ತಿದೆ. ಇದು ಎಲ್ಲ ಯುವಕರಿಗೂ ಪ್ರೇರಣೆಯಾಗುವಂತಹ ಒಂದು ಗೌರವ ಎಂದು ಭಾವಿಸುತ್ತೇನೆ” ಎಂದಿದ್ದಾರೆ.

ಗಂಧದ ಗುಡಿ ಚಲನಚಿತ್ರ ಅತ್ಯಂತ ಯಶಸ್ವಿಯಾಗಲಿ. ಅದೇ ರೀತಿ ಪುನೀತ್ ಪರ್ವ ಕಾರ್ಯಕ್ರಮ ಕೂಡ ಯಶಸ್ವಿಯಾಗಲಿ. ಈ ಕಾರ್ಯಕ್ರಮದ ಮೂಲಕ ಅಪ್ಪುವಿನ ಮೇಲಿನ ನಮ್ಮ ಪ್ರೀತಿ, ವಾತ್ಸಲ್ಯವನ್ನು ಸಮಸ್ತ ಕನ್ನಡ ನಾಡು ತೋರಿಸಿದಂತಾಗುತ್ತದೆ ಎಂದಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top