News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ʼರೋಜ್‌ಗಾರ್ ಮೇಳʼಕ್ಕೆ ಮೋದಿ ಚಾಲನೆ: 75,000 ಮಂದಿಗೆ ನೇಮಕಾತಿ ಪತ್ರ ವಿತರಣೆ

ನವದೆಹಲಿ: 10 ಲಕ್ಷ ಸಿಬ್ಬಂದಿ ನೇಮಕಾತಿ ಅಭಿಯಾನವಾದ ʼರೋಜ್‌ಗಾರ್ ಮೇಳʼಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದರು. ಸಮಾರಂಭದಲ್ಲಿ ಹೊಸದಾಗಿ ಸೇರ್ಪಡೆಗೊಂಡ 75,000 ಮಂದಿಗೆ ನೇಮಕಾತಿ ಪತ್ರಗಳನ್ನು ವಿತರಿಸಲಾಗಿದೆ.

ದೇಶಾದ್ಯಂತ ಹೊಸದಾಗಿ ನೇಮಕಗೊಂಡವರು ಭಾರತ ಸರ್ಕಾರದ 38 ಸಚಿವಾಲಯಗಳು/ಇಲಾಖೆಗಳಿಗೆ ಸೇರ್ಪಡೆಯಾಗುತ್ತಿದ್ದಾರೆ.

ನೇಮಕಗೊಂಡವರು ಗ್ರೂಪ್ – ಎ, ಗ್ರೂಪ್ – ಬಿ (ಗೆಜೆಟೆಡ್), ಗ್ರೂಪ್ – ಬಿ (ನಾನ್ ಗೆಜೆಟೆಡ್) ಮತ್ತು ಗ್ರೂಪ್ – ಸಿ ಎಂದು ವಿವಿಧ ಹಂತಗಳಲ್ಲಿ ಸರ್ಕಾರಕ್ಕೆ ಸೇರುತ್ತಾರೆ.

ವರ್ಚುವಲ್ ಲಾಂಚ್ ಕಾರ್ಯಕ್ರಮದ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿ ಮೋದಿ, “ಭಾರತವು ಇಂದು ವಿಶ್ವದ 5 ನೇ ಅತಿದೊಡ್ಡ ಆರ್ಥಿಕತೆಯಾಗಿದೆ. ಕಳೆದ 8 ವರ್ಷಗಳಲ್ಲಿ, ನಾವು 10 ನೇ ಸ್ಥಾನದಿಂದ 5 ನೇ ಸ್ಥಾನಕ್ಕೆ ಜಿಗಿದಿದ್ದೇವೆ. ಪ್ರಪಂಚದ ಅನೇಕ ದೊಡ್ಡ ಆರ್ಥಿಕತೆಗಳು ನಿರುದ್ಯೋಗ ಮತ್ತು ಹಣದುಬ್ಬರದೊಂದಿಗೆ ಹೋರಾಡುತ್ತಿವೆ ಎಂಬುದು ನಿಜ.  100 ವರ್ಷಗಳಲ್ಲಿನ ದೊಡ್ಡ ಬಿಕ್ಕಟ್ಟಿನ ಅಡ್ಡಪರಿಣಾಮಗಳು ಕೇವಲ 100 ದಿನಗಳಲ್ಲಿ ಹೋಗಲಾರವು” ಎಂದಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top