ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಗದ್ದುಗೆ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದ ವಶವಾಗಿದ್ದು, ಇದರ ನೂತನ ಮೇಯರ್ ಆಗಿ ಕಾಂಗ್ರೆಸ್ನ ಬಿ.ಎಸ್.ಮಂಜುನಾಥ ರೆಡ್ಡಿ ಆಯ್ಕೆಯಾಗಿದ್ದಾರೆ.
ಇಂದು ನಡೆದ ಬಿಬಿಎಂಪಿ ಮೇಯರ್ ಸ್ಥಾನದ ಚುನಾವಣೆಯಲ್ಲಿ ಮಡಿವಾಳ ವಾರ್ಡ್ನ ಸದಸ್ಯ ಮಂಜುನಾಥ ರೆಡ್ಡಿ 131 ಮತಗಳನ್ನು ಪಡೆದ್ದಾರೆ. ವಿಧಾನ ಪರಿಷತ್ ಸದಸ್ಯರು, ರಾಜ್ಯಸಭಾ ಸದಸ್ಯರು, ಸಂಸದರು ಇವರ ಪರ ಮತ ಚಲಾಯಿಸಿದ್ದರು.
ಮಂಜುನಾಥ್ ಅವರು ಈ ಹಿಂದೆ 3 ಬಾರಿ ಬಿಬಿಎಂಪಿ ಕಾರ್ಪೋರೇಟರ್ ಆಗಿ ಆಯ್ಕೆಗೊಂಡಿದ್ದು, 2013ರ ಬಿಬಿಎಂಪಿ ಪ್ರತಿಪಕ್ಷ ನಾಯಕರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ. ವೃಷಭಾವತಿ ವಾರ್ಡ್ನಿಂದ ಜೆಡಿಎಸ್ ಸದಸ್ಯೆ ಎಸ್. ಪಿ. ಹೇಮಲತಾ ಅವರು 131 ಮತ ಪಡೆದು ಉಪಮೇಯರ್ ಆಗಿ ಆಯ್ಕೆಯಾಗಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.