News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

8 ವರ್ಷದಲ್ಲಿ 3.5 ಕೋಟಿ ಬಡವರು ಆವಾಸ್‌ ಯೋಜನೆಯಡಿ ಮನೆ ಪಡೆದಿದ್ದಾರೆ : ಮೋದಿ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಧ್ಯಪ್ರದೇಶದಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ-ಗ್ರಾಮೀಣ್ (PMAY-G) ನ 4.5 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳ ‘ಗೃಹ ಪ್ರವೇಶ’ದಲ್ಲಿ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಭಾಗವಹಿಸಿದರು ಮತ್ತು ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ನಿರ್ಮಿಸಲಾದ ಮನೆಗಳನ್ನು ಉದ್ಘಾಟಿಸಿದರು ಎಂದು ಮೂಲಗಳು ತಿಳಿಸಿವೆ.

ಸಾತ್ನಾದಲ್ಲಿ ಆಯೋಜಿಸಲಾದ ರಾಜ್ಯ ಮಟ್ಟದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಧನ್ತೇರಸ್ ಮತ್ತು ದೀಪಾವಳಿಯ ಸಂದರ್ಭವು ನಮ್ಮ ಜೀವನದಲ್ಲಿ ತಾಜಾತನವನ್ನು ತರುವ ಹೊಸ ಆರಂಭವನ್ನು ನೀಡುತ್ತದೆ ಎಂದು ಹೇಳಿದರು.

ಮನೆಯು ಎಲ್ಲರಿಗೂ ಪ್ರಗತಿಯನ್ನು ತರುತ್ತದೆ ಎಂದ ಅವರು, ಮನೆಗಳ ನಿರ್ಮಾಣದೊಂದಿಗೆ ಗ್ರಾಮವೂ ಪ್ರಗತಿಯಾಗುತ್ತದೆ. PMAY-G ಅಡಿಯಲ್ಲಿ, ಕಳೆದ 8 ವರ್ಷಗಳಲ್ಲಿ 3.5 ಕೋಟಿಗೂ ಹೆಚ್ಚು ಬಡ ಕುಟುಂಬಗಳು ಹೊಸ ಮನೆಗಳನ್ನು ಪಡೆದಿವೆ ಎಂದಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, ತಮ್ಮ ಸರ್ಕಾರ ಬಡವರು ಮತ್ತು ದುರ್ಬಲರ  ಏಳಿಗೆಗೆ ಬದ್ಧವಾಗಿದೆ. ಶೌಚಾಲಯ, ವಿದ್ಯುತ್, ನೀರು ಅಥವಾ ಗ್ಯಾಸ್ ಆಗಿರಲಿ, ಅವರ ಅಗತ್ಯಗಳನ್ನು ಪೂರೈಸಲು ನಾವು ಎಲ್ಲಾ ಸೌಲಭ್ಯಗಳನ್ನು ಪ್ರಧಾನಮಂತ್ರಿ ಆವಾಸ್ ಯೋಜನೆಯಲ್ಲಿ ಸೇರಿಸಿದ್ದೇವೆ ಎಂದು ಹೇಳಿದರು.

ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಮುಖ್ಯ ಗುರಿ – ಗ್ರಾಮೀಣ ಕೆಲವು ಮೂಲಭೂತ ಸೌಕರ್ಯಗಳೊಂದಿಗೆ ಶಾಶ್ವತ ಮನೆಗಳನ್ನು ಒದಗಿಸುವುದಾಗಿದೆ ಎಂದರು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top