News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ರಾಜೀವ್ ಗಾಂಧಿ ಫೌಂಡೇಶನ್ ಪರವಾನಗಿ ರದ್ದು

ನವದೆಹಲಿ: ಕೇಂದ್ರ ಗೃಹ ಸಚಿವಾಲಯವು ರಾಜೀವ್ ಗಾಂಧಿ ಫೌಂಡೇಶನ್ (RGF) ಮತ್ತು ರಾಜೀವ್ ಗಾಂಧಿ ಚಾರಿಟೇಬಲ್ ಟ್ರಸ್ಟ್ (RGCT) ನ ವಿದೇಶಿ ಕೊಡುಗೆ ನಿಯಂತ್ರಣ ಕಾಯಿದೆ (FCRA) ಪರವಾನಗಿಗಳನ್ನು ಕಾನೂನುಗಳ ಉಲ್ಲಂಘನೆ ಮಾಡಿದ್ದಕ್ಕಾಗಿ ರದ್ದುಗೊಳಿಸಿದೆ.

ಈ ಎರಡು ಎನ್‌ಜಿಒಗಳು ಪ್ರಸ್ತುತ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿಯವರ ನೇತೃತ್ವದಲ್ಲಿ ಕಾರ್ಯನಿರ್ವಹಿಸುತ್ತಿವೆ. ಈ ಎನ್‌ಜಿಒಗಳ ವಿರುದ್ಧ ತನಿಖೆ ನಡೆಸಿದ ನಂತರ ಎಫ್‌ಸಿಆರ್‌ಎ ಪರವಾನಗಿಗಳನ್ನು ರದ್ದುಗೊಳಿಸಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಕೆಲವು ಅಕ್ರಮಗಳ ತನಿಖೆಗಾಗಿ ಗೃಹ ಸಚಿವಾಲಯವು 2020 ರಲ್ಲಿ ಅಂತರ-ಸಚಿವಾಲಯ ಸಮಿತಿಯನ್ನು ರಚಿಸಿತ್ತು. ಸಮಿತಿಯು ಗೃಹ ಮತ್ತು ಹಣಕಾಸು ಸಚಿವಾಲಯಗಳು ಹಾಗೂ ಕೇಂದ್ರೀಯ ತನಿಖಾ ದಳದ ಅಧಿಕಾರಿಗಳನ್ನು ಒಳಗೊಂಡಿತ್ತು. ಈ ಟ್ರಸ್ಟ್‌ಗಳು ಆದಾಯ ತೆರಿಗೆ ಸಲ್ಲಿಸುವಾಗ ಯಾವುದೇ ದಾಖಲೆಗಳನ್ನು ದುರ್ಬಳಕೆ ಮಾಡಿಕೊಂಡಿದ್ದರೆ ಅಥವಾ ವಿದೇಶಗಳಿಂದ ಪಡೆದ ಹಣವನ್ನು ದುರುಪಯೋಗಪಡಿಸಿಕೊಂಡಿದ್ದರೆ ಮತ್ತು ಅಕ್ರಮವಾಗಿ ಬಳಸಿದ್ದರೆ ತನಿಖೆ ಮಾಡಲು ಸಮಿತಿಗೆ ಸೂಚಿಸಲಾಗಿದೆ. ರಾಜೀವ್ ಗಾಂಧಿ ಫೌಂಡೇಶನ್ ಅನ್ನು

1991 ರಲ್ಲಿ ಮತ್ತು ರಾಜೀವ್ ಗಾಂಧಿ ಚಾರಿಟಬಲ್ ಟ್ರಸ್ಟ್ ಅನ್ನು 2002 ರಲ್ಲಿ ಸ್ಥಾಪಿಸಲಾಯಿತು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top