News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಇಂದು ಭಾಗಶಃ ಸೂರ್ಯಗ್ರಹಣಕ್ಕೆ ಸಾಕ್ಷಿಯಾಗಲಿದೆ ಭಾರತ

ನವದೆಹಲಿ: ಇಂದು ಭಾರತ ಮತ್ತು ವಿಶ್ವದ ಇತರ ಕೆಲವು ಸ್ಥಳಗಳು ಇಂದು ಭಾಗಶಃ ಸೂರ್ಯಗ್ರಹಣಕ್ಕೆ ಸಾಕ್ಷಿಯಾಗಲಿವೆ. ಈಶಾನ್ಯ ಪ್ರದೇಶದ ಕೆಲವು ಭಾಗಗಳನ್ನು ಹೊರತುಪಡಿಸಿ, ಭಾರತದ ಹೆಚ್ಚಿನ ಭಾಗಗಳು ಗ್ರಹಣಕ್ಕೆ ಸಾಕ್ಷಿಯಾಗಲಿದೆ.

ಭಾಗಶಃ ಸೂರ್ಯಗ್ರಹಣವು ಸಂಜೆ 4:29 ರಿಂದ ಗೋಚರಿಸುತ್ತದೆ ಮತ್ತು ಸಂಜೆ 5:42 ಕ್ಕೆ ಸೂರ್ಯಾಸ್ತದೊಂದಿಗೆ ಕೊನೆಗೊಳ್ಳುತ್ತದೆ.

ಭಾರತದ ಬಹುತೇಕ ಎಲ್ಲ ಭಾಗಗಳಲ್ಲೂ ಭಾಗಶಃ ಸೂರ್ಯಗ್ರಹಣ ಗೋಚರಿಸಲಿದೆ. ಬೆಂಗಳೂರಿನಲ್ಲಿ ಸಂಜೆ 5.12ರಿಂದ 5.56ರವರೆಗೆ ಅಂದರೆ 44 ನಿಮಿಷಗಳ ಕಾಲ ಗ್ರಹಣ ಗೋಚರಿಸಲಿದೆ. ಗುಜರಾತ್‌ನ ದ್ವಾರಕಾದಲ್ಲಿ ದೀರ್ಘ‌ಕಾಲ ಅಂದರೆ 1 ಗಂಟೆ 45 ನಿಮಿಷಗಳ ಕಾಲ ಗ್ರಹಣವಿರಲಿದೆ ಎಂದು ತಿಳಿದುಬಂದಿದೆ. ಇದಕ್ಕೂ ಮೊದಲು ವರ್ಷದ ಮೊದಲ ಸೂರ್ಯಗ್ರಹಣ ಏಪ್ರಿಲ್ 30ರಂದು ಸಂಭವಿಸಿತ್ತು.

ದ್ವಾರಕಾ, ನವದೆಹಲಿ, ಮುಂಬೈ, ಅಹಮದಾಬಾದ್, ಸೂರತ್, ಪುಣೆ, ಜೈಪುರ, ಇಂದೋರ್, ಥಾಣೆ, ಭೋಪಾಲ್, ಲುಧಿಯಾನ, ಆಗ್ರಾ, ಚಂಡೀಗಢ, ಉಜ್ಜಯಿನಿ, ಮಥುರಾ, ಪೋರಬಂದರ್, ಗಾಂಧಿನಗರ, ಸಿಲ್ವಾಸ, ಸೂರತ್ ಮತ್ತು ಪಣಜಿ  ಒಂದು ಗಂಟೆಗೂ ಹೆಚ್ಚು ಕಾಲ ಗ್ರಹಣಕ್ಕೆ ಸಾಕ್ಷಿಯಾಗುವ ನಗರಗಳು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top