News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಕಾಂಗ್ರೆಸ್‌ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ಕಾಂಗ್ರೆಸ್‌ ಪಕ್ಷದ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಅವರು ಇಂದು ಅಧಿಕಾರ ಸ್ವೀಕಾರ ಮಾಡಿದ್ದಾರೆ. ಅಧಿಕಾರ ಸ್ವೀಕರಿಸುವ ಮುನ್ನ ಅವರು ರಾಜ್‌ಘಾಟ್‌ಗೆ ತೆರಳಿ ಮಹತ್ಮಾ ಗಾಂಧಿ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದರು.

ಈ ವರ್ಷದೊಳಗೆ ಎರಡು ರಾಜ್ಯಗಳಲ್ಲಿ ಚುನಾವಣೆ ನಡೆಯಲಿದೆ, ಮುಂದಿನ ವರ್ಷ ಎರಡು ರಾಜ್ಯಗಳ ಕಾಂಗ್ರೆಸ್ ಸರ್ಕಾರಗಳಿಗೆ ಸವಾಲುಗಳು ಎದುರಾಗಲಿದೆ ಮತ್ತು 2024 ರಲ್ಲಿ ಲೋಕಸಭಾ ಚುನಾವಣೆ ಇದೆ. ಇವೆಲ್ಲದರಲ್ಲೂ ಕಾಂಗ್ರೆಸ್‌ ಪಕ್ಷವನ್ನು ದಡ ಸೇರಿಸುವ ಹೊಣೆಗಾರಿಕೆ ಖರ್ಗೆ ಅವರ ಮೇಲಿದೆ.

ಕಳೆದ ವಾರವಷ್ಟೇ ನಡೆದ ಅಧ್ಯಕ್ಷೀಯ ಚುನಾವಣೆಯಲ್ಲಿ 66 ವರ್ಷದ ಶಶಿ ತರೂರ್ ಅವರನ್ನು ಸೋಲಿಸಿದ 80 ವರ್ಷ ವಯಸ್ಸಿನ ಖರ್ಗೆ ಅವರು ರಾಜಕೀಯ ಅನುಭವಿಯಾಗಿದ್ದಾರೆ. ಕಳೆದ 24 ವರ್ಷಗಳಲ್ಲಿ ಗಾಂಧಿ ಕುಟುಂಬದ ಹೊರಗಿನ ಮೊದಲ ಕಾಂಗ್ರೆಸ್ ಮುಖ್ಯಸ್ಥರಾಗಿದ್ದಾರೆ. ಆದರೆ ಇವರು ಗಾಂಧಿ ಕುಟುಂಬ ರಬ್ಬರ್‌ ಸ್ಟ್ಯಾಂಪ್‌ ಆಗಲಿದ್ದಾರೆ ಎಂಬ ಮಾತುಗಳೂ ಕೇಳಿ ಬರುತ್ತಿವೆ.

ಕೇವಲ ಎರಡು ವಾರಗಳಲ್ಲಿ ಅಂದರೆ ನವೆಂಬರ್ 12 ರಂದು ಹಿಮಾಚಲದಲ್ಲಿ ಮತದಾನ ನಡೆಯಲಿದೆ. ಇಲ್ಲಿ ಮತ್ತೆ ಅಧಿಕಾರಕ್ಕೇರುವ ಕನಸನ್ನು ಕಾಂಗ್ರೆಸ್‌ ಕಾಣುತ್ತಿದೆ. ಈ ಚುನಾವಣೆ ಖರ್ಗೆ ಅವರಿಗೆ ಸವಾಲಾಗಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top