News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

3.5 ಪಟ್ಟು ಹೆಚ್ಚಾದ ಭಾರತದ ಸಂಗೀತ ಉಪಕರಣಗಳ ರಫ್ತು

ನವದೆಹಲಿ: 2013-14ರ ಇದೇ ಅವಧಿಯಲ್ಲಿ 49 ಕೋಟಿ ರೂಪಾಯಿಗಳಷ್ಟಿದ್ದ ಭಾರತದ ಸಂಗೀತ ಉಪಕರಣಗಳ ರಫ್ತು ಈ ಹಣಕಾಸು ವರ್ಷದಲ್ಲಿ ಏಪ್ರಿಲ್-ಸೆಪ್ಟೆಂಬರ್ ಅವಧಿಯಲ್ಲಿ 172 ಕೋಟಿ ರೂಪಾಯಿಗಳಿಗೆ ಏರಿಕೆಯಾಗಿದೆ.

ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಟ್ವೀಟ್‌ನಲ್ಲಿ ಈ ಮಾಹಿತಿಯನ್ನು ಬಹಿರಂಗಪಡಿಸಿದ್ದು, ಸಂಗೀತ ಉಪಕರಣಗಳ ರಫ್ತು 3.5 ಪಟ್ಟು ಹೆಚ್ಚು ಹೆಚ್ಚಾಗಿದೆ ಎಂದಿದ್ದಾರೆ.

ದೇಶದ ಸಂಗೀತ ಉಪಕರಣಗಳ ರಫ್ತು ಹೆಚ್ಚಳದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸಂತಸ ವ್ಯಕ್ತಪಡಿಸಿದ್ದಾರೆ.

ಗೋಯಲ್ ಅವರ ಟ್ವೀಟ್ ಅನ್ನು ಹಂಚಿಕೊಂಡಿರು ಪ್ರಧಾನಿ, ಇದು ಉತ್ತೇಜನಕಾರಿಯಾಗಿದೆ. ಭಾರತೀಯ ಸಂಗೀತವು ವಿಶ್ವಾದ್ಯಂತ ಜನಪ್ರಿಯತೆಯನ್ನು ಗಳಿಸುವುದರೊಂದಿಗೆ, ಈ ವಲಯದಲ್ಲಿ ಮತ್ತಷ್ಟು ಬೆಳೆಯಲು ಉತ್ತಮ ಅವಕಾಶವಿದೆ ಎಂದು ಎಂದು ಹೇಳಿದ್ದಾರೆ.

ಭಾರತದ ಸಂಗೀತದ ಬಗ್ಗೆ ವಿದೇಶಗಳಲ್ಲಿ ಹೆಚ್ಚುತ್ತಿರುವ ಆಸಕ್ತಿಗಳ ಪರಿಣಾಮವಾಗಿ ಸಂಗೀತ ಉಪಕರಣಗಳ ರಫ್ತು ಹೆಚ್ಚಳವಾಗುತ್ತಿದೆ ಎಂದು ಹೇಳಲಾಗಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top