ರಾಂಪುರ: ಪ್ರಧಾನಿ ನರೇಂದ್ರ ಮೋದಿ, ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಐಎಎಸ್ ಅಧಿಕಾರಿಯೊಬ್ಬರ ವಿರುದ್ಧ ಅವಹೇಳನಕಾರಿ ಭಾಷಣ ಮಾಡಿದ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ಮಾಜಿ ಸಚಿವ ಅಜಂ ಖಾನ್ ಅವರನ್ನು ದೋಷಿ ಎಂದು ನ್ಯಾಯಾಲಯ ಪ್ರಕಟಿಸಿದೆ.
ಪ್ರಧಾನಿ ಮೋದಿ, ಯೋಗಿ ಆದಿತ್ಯನಾಥ್ ಮತ್ತು ಅಂದಿನ ಜಿಲ್ಲಾಧಿಕಾರಿ ಆಂಜನೇಯ ಕುಮಾರ್ ಸಿಂಗ್ ವಿರುದ್ಧ ಪ್ರಚೋದನಕಾರಿ ಭಾಷಣ ಮಾಡಿದ್ದಕ್ಕಾಗಿ ಖಾನ್ ವಿರುದ್ಧ ಆರೋಪ ಹೊರಿಸಲಾಗಿತ್ತು.
ಕೆಟ್ಟ ಪದ ಬಳಕೆ ಮಾಡಿ ನಿಂದಿಸಿದ ಪ್ರಕರಣದಲ್ಲಿ ಅಜಂ ಖಾನ್ಗೆ ಶಿಕ್ಷೆ ವಿಧಿಸಲಾಗಿದೆ. ರಾಮ್ಪುರ ನ್ಯಾಯಾಲಯ ಅವರಿಗೆ ಶಿಕ್ಷೆ ವಿಧಿಸಿದೆ.
2019ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ರಾಂಪುರದಲ್ಲಿ ನಡೆದ ಸಭೆಯಲ್ಲಿ ಅಜಂ ಖಾನ್ ಅವರು ಅಸಭ್ಯ ಟೀಕೆಗಳನ್ನು ಮಾಡಿದ್ದರು. ಈ ಸಂಬಂಧ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆದಿತ್ತು. ಇಂದು ಸಂಜೆ 4 ಗಂಟೆಗೆ ಶಿಕ್ಷೆಯ ಪ್ರಮಾಣ ಪ್ರಕಟವಾಗಲಿದೆ ಎಂದು ಮೂಲಗಳು ತಿಳಿಸಿವೆ.
ಅಪರಾಧ ಸಾಬೀತಾದ ನಂತರ ಎರಡು ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ಕಾಲ ಜೈಲು ಶಿಕ್ಷೆಗೆ ಗುರಿಯಾದರೆ ಅಜಂ ಖಾನ್ ರಾಜ್ಯ ವಿಧಾನಸಭೆಯ ಸದಸ್ಯತ್ವವನ್ನು ಕಳೆದುಕೊಳ್ಳಬೇಕಾಗುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.