ಬೆಂಗಳೂರು: 67 ನೇ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಕೋಟಿ ಕಂಠ ಗಾಯನ ಇಂದು ಜರುಗಲಿದೆ.
ಕಾರ್ಯಕ್ರಮಕ್ಕೆ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು, ಸಾವಿರಾರು ಜನರು ಗೀತ ಗಾಯನಕ್ಕೆ ಸಿದ್ಧತೆ ಮಾಡಿಕೊಂಡಿದ್ದಾರೆ. 41 ದೇಶಗಳು, 27 ರಾಜ್ಯಗಳು, 18,800 ಸಂಘ-ಸಂಸ್ಥೆಗಳು, 10 ಸಾವಿರಕ್ಕೂ ಅಧಿಕ ಸ್ಥಳಗಳಲ್ಲಿ ಕನ್ನಡದ ಹಾಡುಗಳು ಮೊಳಗಲಿವೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ತಿಳಿಸಿದೆ.
ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ 50 ಸಾವಿರ ಜನರು ಆಯ್ದ 6 ಹಾಡುಗಳನ್ನು ಸಾಮೂಹಿಕವಾಗಿ ಹಾಡಲಿದ್ದಾರೆ. ಬೆಂಗಳೂರಿನ ವಿಧಾನಸೌಧ ಮೆಟ್ಟಿಲು, ಎಲ್ಲ ಮೆಟ್ರೋ ನಿಲ್ದಾಣ, ವಿಮಾನ ನಿಲ್ದಾಣ, ಬಸ್ ನಿಲ್ದಾಣಗಳು, ಆಟೊ ತಂಗುದಾಣಗಳು, ಕಾರಾಗೃಹ, ಐಟಿಬಿಟಿ ಸಂಸ್ಥೆಗಳು, ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನ, ಲಾಲ್ಬಾಗ್ಗಳಲ್ಲಿ ಗೀತ ಗಾಯನ ಕಾರ್ಯಕ್ರಮ ನಡೆಯಲಿದೆ.
ಮೈಸೂರು ಅರಮನೆ, ಚಿತ್ರದುರ್ಗದ ಕೋಟೆ, ಮಂಗಳೂರು ಕಡಲತೀರ, ತುಮಕೂರು ಸಿದ್ದಗಂಗಾ ಮಠ, ಪ್ರವಾಸಿ ತಾಣಗಳಾದ ಶೃಂಗೇರಿ, ಹಂಪಿ, ಬೇಲೂರು, ಪಾವಗಡದ ಸೌರಶಕ್ತಿ ಘಟಕ, ರಾಯಚೂರು ಉಷ್ಣವಿದ್ಯುತ್ ಸ್ಥಾವರ, ಮಣಿಪಾಲದ ಕೆಎಂಸಿ, ಹುಬ್ಬಳ್ಳಿಯ ಕಿಮ್ಸ್ ಸೇರಿದಂತೆ ಹಲವೆಡೆ ಕಾರ್ಯಕ್ರಮ ನಡೆಯಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.