ಸೂರಜ್ಕುಂಡ್ : ಪ್ರಧಾನಿ ನರೇಂದ್ರ ಮೋದಿ ಅವರು ಪೊಲೀಸರಿಗೆ “ಒಂದು ರಾಷ್ಟ್ರ, ಒಂದು ಸಮವಸ್ತ್ರ” ಪ್ರಸ್ತಾಪ ಮಾಡಿದ್ದಾರೆ. ಅಂದರೆ ಎಲ್ಲಾ ರಾಜ್ಯಗಳ ಪೊಲೀಸರಿಗೆ ಒಂದೇ ರೀತಿಯಾದ ಸಮವಸ್ತ್ರ. ಇದು ಕೇವಲ ಸಲಹೆ, ಇದನ್ನು ಯಾರ ಮೇಲೂ ಹೇರುವುದಿಲ್ಲ ಎಂಬುದನ್ನು ಅವರು ಸ್ಪಷ್ಟಪಡಿಸಿದ್ದಾರೆ.
ರಾಜ್ಯಗಳ ಗೃಹ ಮಂತ್ರಿಗಳ ಚಿಂತನ್ ಶಿವಿರ್ ಉದ್ದೇಶಿಸಿ ವಿಡಿಯೊ ಸಂವಾದದಲ್ಲಿ ಮಾತನಾಡಿದ ವೇಳೆ ಪ್ರಧಾನಿ ಈ ಪ್ರಸ್ತಾಪ ಮುಂದಿಟ್ಟಿದ್ದಾರೆ.
ದೇಶದಾದ್ಯಂತ ಪೊಲೀಸರ ಗುರುತು ಒಂದೇ ಆಗಿದ್ದರೆ ಒಳ್ಳೆಯದು ಎಂದು ನಾನು ಭಾವಿಸುತ್ತೇನೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಇದಲ್ಲದೆ, ಅಪರಾಧಗಳು ಮತ್ತು ಅಪರಾಧಿಗಳನ್ನು ನಿಭಾಯಿಸಲು ರಾಜ್ಯಗಳ ನಡುವೆ ನಿಕಟ ಸಹಕಾರವನ್ನು ಅಗತ್ಯ ಎಂದು ಪ್ರಧಾನಿ ಹೇಳಿದ್ದಾರೆ.
“ಪೊಲೀಸರಿಗೆ ‘ಒಂದು ರಾಷ್ಟ್ರ, ಒಂದು ಸಮವಸ್ತ್ರ’ ಬರಬಹುದು. ಅದು ಇಂದು ಆಗದೇ ಇರಬಹುದು. ಅದು 5 ವರ್ಷ, 50 ವರ್ಷ ಅಥವಾ 100 ವರ್ಷಗಳು ತೆಗೆದುಕೊಳ್ಳಬಹುದು, ಆದರೆ ನಾವು ಯೋಚಿಸೋಣ” ಎಂದು ಹೇಳಿದರು. ದೇಶದಾದ್ಯಂತ ಪೊಲೀಸರ ಗುರುತು ಒಂದೇ ಆಗಿರಬಹುದು ಉತ್ತಮ ಎಂದು ನಾನು ಭಾವಿಸುತ್ತೇನೆ” ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.