ಬೆಂಗಳೂರು: ಸರ್ಕಾರಿ ಶಾಲೆಗಳಿಗೆ ಹೊಸ ರೂಪವನ್ನು ನೀಡುವ ಸಲುವಾಗಿ ಬಣ್ಣದರ್ಪಣೆ ಅಭಿಯಾನವನ್ನು ಹಮ್ಮಿಕೊಳ್ಳಲಾಗುವುದು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಹೇಳಿದ್ದಾರೆ.
ಈ ಬಗ್ಗೆ ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಸರ್ಕಾರಿ ಶಾಲೆಗಳಿಗೆ ಹೊಸ ರೂಪವನ್ನು ನೀಡಲು ಬಣ್ಣದರ್ಪನೆ ಅಭಿಯಾನವನ್ನು ಹಮ್ಮಿಕೊಂಡಿದ್ದೇವೆ. ನಾಳೆ ಕುಂದಗೋಳದ ಹರಭಟ ಶಾಲೆಯ ಮೈದಾನದಲ್ಲಿ ಅಭಿಯಾನಕ್ಕೆ ಚಾಲನೆ ನೀಡಲಾಗುತ್ತದೆ” ಎಂದಿದ್ದಾರೆ.
ಬಣ್ಣ ಕಳೆದುಕೊಂಡಿರುವ, ದುರಸ್ತಿಯ ಅಗತ್ಯ ಇರುವ ಶಾಲೆಗಳಿಗೆ ಹೊಸ ರೂಪ ನೀಡಲು ಈ ಅಭಿಯಾನ ಹಮ್ಮಿಕೊಳ್ಳಲಾಗುತ್ತದೆ. ಸರ್ಕಾರಿ ಶಾಲಾ ಕಾಲೇಜುಗಳು ಯಾವುದೇ ರೀತಿಯಲ್ಲೂ ಸುಣ್ಣಬಣ್ಣ ಕಳೆದುಕೊಂಡು ಕಳೆಗುಂದಬಾರದು ಎಂಬ ಕಾರಣದಿಂದ ಈ ಅಭಿಯಾನವನ್ನು ಆಯೋಜನೆ ಮಾಡಲಾಗುತ್ತಿದೆ” ಎಂದಿದ್ದಾರೆ.
ಕ್ಷಮತಾ ಸೇವಾ ಸಂಸ್ಥೆ ಈ ಅಭಿಯಾನಕ್ಕಾಗಿ ಉಚಿತ ಬಣ್ಣಗಳನ್ನು ನೀಡಲು ಮುಂದಾಗಿದೆ. ಇದೇ ರೀತಿ ದಾನಿಗಳು ಅಭಿಯಾನಕ್ಕೆ ಕೈಜೋಡಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.