ಜೈಪುರ: ರಾಜಸ್ಥಾನದ ರಾಜಸಮಂದ್ ಜಿಲ್ಲೆಯ ನಾಥದ್ವಾರ ಪಟ್ಟಣದಲ್ಲಿ ಸ್ಥಾಪಿಸಲಾಗಿರುವ 369 ಅಡಿ ಎತ್ತರದ ಶಿವನ ಪ್ರತಿಮೆ ‘ವಿಶ್ವಾಸ್ ಸ್ವರೂಪಂ’ ಇಂದು ಲೋಕಾರ್ಪಣೆಗೊಂಡಿದೆ. ಈ ಪ್ರತಿಮೆಯನ್ನು ವಿಶ್ವದ ಅತಿ ಎತ್ತರದ ಶಿವನ ಪ್ರತಿಮೆ ಎಂದು ಪರಿಗಣಿಸಲಾಗಿದೆ.
ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ವಿಧಾನಸಭಾ ಸ್ಪೀಕರ್ ಸಿಪಿ ಜೋಶಿ ಮತ್ತು ಇತರರ ಸಮ್ಮುಖದಲ್ಲಿ 369 ಅಡಿ ಎತ್ತರದ ಭವ್ಯವಾದ ಶಿವನ ಪ್ರತಿಮೆಯನ್ನು ಆಧ್ಯಾತ್ಮ ನಾಯಕ ಮತ್ತು ಖ್ಯಾತ ಪ್ರಚಾರಕ ಮೊರಾರಿ ಬಾಪು ಅವರು ಸಾರ್ವಜನಿಕರಿಗೆ ಇಂದು ಅನಾವರಣಗೊಳಿಸಿದರು.
ಉದಯಪುರದಿಂದ 45 ಕಿಮೀ ದೂರದಲ್ಲಿರುವ ಈ ಪ್ರತಿಮೆಯನ್ನು ತತ್ ಪದಮ್ ಸಂಸ್ಥಾನ ನಿರ್ಮಿಸಿದೆ.
ಪ್ರತಿಮೆಯ ಉದ್ಘಾಟನೆಯ ನಂತರ ಅಕ್ಟೋಬರ್ 29 ರಿಂದ ನವೆಂಬರ್ 6 ರವರೆಗೆ ಮುಂಬರುವ ಒಂಬತ್ತು ದಿನಗಳವರೆಗೆ ಧಾರ್ಮಿಕ, ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
“ಶ್ರೀನಾಥಜಿ ನಗರದಲ್ಲಿ ಸ್ಥಾಪಿಸಲಾದ ಈ ಅದ್ಭುತ ಶಿವನ ಪ್ರತಿಮೆಯು ಧಾರ್ಮಿಕ ಪ್ರವಾಸೋದ್ಯಮಕ್ಕೆ ಹೊಸ ಆಯಾಮವನ್ನು ನೀಡುತ್ತದೆ” ಎಂದು ಹೇಳಲಾಗಿದೆ. 51 ಬಿಘಾಗಳ ವಿಸ್ತಾರದಲ್ಲಿ ಬೆಟ್ಟದ ತುದಿಯಲ್ಲಿ ಸ್ಥಾಪಿಸಲಾದ ಈ ಪ್ರತಿಮೆಯನ್ನು ಧ್ಯಾನದ ಭಂಗಿಯಲ್ಲಿ ವಿನ್ಯಾಸಗೊಳಿಸಲಾಗಿದೆ ಮತ್ತು 20 ಕಿಲೋಮೀಟರ್ ದೂರದಿಂದಲೇ ಇದು ಗೋಚರಿಸುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.