ಹಾವೇರಿ: 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಹಾವೇರಿಯಲ್ಲಿ ಜನವರಿ 6, 7 ಮತ್ತು 8 ರಂದು ನಡೆಯಲಿದೆ. ಈ ಹಿನ್ನೆಲೆಯಲ್ಲಿ ಭರದ ಸಿದ್ಧತೆಗಳು ನಡೆಯುತ್ತಿವೆ.
ಇಂದು ಹಾವೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಸಾಹಿತ್ಯ ಸಮ್ಮೇಳನದ ಲಾಂಛನವನ್ನು ಬಿಡುಗಡೆ ಮಾಡಲಾಯಿತು.
ಹಾವೇರಿ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್, ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್, ಕರ್ನಾಟಕ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಮಹೇಶ್ ಜೋಶಿ ಮುಂತಾದವರು ಈ ಸಂದರ್ಭದಲ್ಲಿ ಭಾಗಿಯಾಗಿದ್ದರು.
ಸಭೆಯ ಬಗ್ಗೆ ಟ್ವಿಟ್ ಮಾಡಿರುವ ಸಚಿವರು, ” ಹಾವೇರಿಯಲ್ಲಿ ಮುಂಬರುವ ಜನವರಿ ತಿಂಗಳಿನಲ್ಲಿ ನಡೆಯಲಿರುವ ಕನ್ನಡ ಸಾಹಿತ್ಯ ಸಮ್ಮೇಳನದ ಸ್ಥಳ ಪರಿಶೀಲನೆ & ಪೂರ್ವಭಾವಿ ಸಭೆಯನ್ನು ಇಂದು ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ಅರವರೊಂದಿಗೆ ನಡೆಸಲಾಯಿತು. ಸಮ್ಮೇಳನವನ್ನು ಅಚ್ಚುಕಟ್ಟಾಗಿ ನಡೆಸಲು ಈಗಾಗಲೇ 17 ಸಮಿತಿಗಳನ್ನು ರಚಿಸಲಾಗಿದ್ದು ಇನ್ನಷ್ಟು ಸಮಿತಿಗಳನ್ನು ರಚಿಸಲಾಗುವುದು. ಕೋರೋನಾ ನಂತರದ ಸಮ್ಮೇಳನವಾಗಿರುವ ಕಾರಣ 3 ಲಕ್ಷಕ್ಕೂ ಹೆಚ್ಚು ಜನ ಭಾಗವಹಿಸುವ ನಿರೀಕ್ಷೆ ಇದ್ದು,ಸರ್ಕಾರ ಸಮ್ಮೇಳನಕ್ಕೆಂದು ₹20 ಕೋಟಿ ಮಂಜೂರು ಮಾಡಿದೆ. ಈ ಹಿಂದಿನ ಎಲ್ಲಾ ಸಮ್ಮೇಳನಗಳಿಗಿಂತ ಈ ಸಮ್ಮೇಳನ ಯಶಸ್ವಿಯಾಗಬೇಕು, ಆ ನಿಟ್ಟಿನಲ್ಲಿ ಸರ್ವ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ” ಎಂದಿದ್ದಾರೆ.
ಹಾವೇರಿಯಲ್ಲಿ ಮುಂಬರುವ ಜನವರಿ ತಿಂಗಳಿನಲ್ಲಿ ನಡೆಯಲಿರುವ ಕನ್ನಡ ಸಾಹಿತ್ಯ ಸಮ್ಮೇಳನದ ಸ್ಥಳ ಪರಿಶೀಲನೆ & ಪೂರ್ವಭಾವಿ ಸಭೆಯನ್ನು ಇಂದು ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ @ShivaramHebbar ರವರೊಂದಿಗೆ ನಡೆಸಲಾಯಿತು.ಸಮ್ಮೇಳನವನ್ನು ಅಚ್ಚುಕಟ್ಟಾಗಿ ನಡೆಸಲು ಈಗಾಗಲೇ 17 ಸಮಿತಿಗಳನ್ನು ರಚಿಸಲಾಗಿದ್ದು ಇನ್ನಷ್ಟು ಸಮಿತಿಗಳನ್ನು ರಚಿಸಲಾಗುವುದು pic.twitter.com/5zX88jVsVE
— Sunil Kumar Karkala (@karkalasunil) October 29, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.