ಅಹ್ಮದಾಬಾದ್: ಗುಜರಾತ್ನ ಗಾಂಧಿನಗರದ ರಾಜಭವನದಲ್ಲಿ ಮೋರ್ಬಿ ಸೇತುವೆ ಕುಸಿತದ ಘಟನೆಗೆ ಸಂಬಂಧಿಸಿದಂತೆ ಪರಿಹಾರ ಕಾರ್ಯಾಚರಣೆಗಳ ಪರಿಶೀಲನೆಗಾಗಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆದಿದೆ
ಭಾನುವಾರ ಸಂಜೆ ಸಂಭವಿಸಿದ ಅವಘಡದ ನಂತರ ನಡೆಯುತ್ತಿರುವ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳ ಕುರಿತು ಅಧಿಕಾರಿಗಳು ಪ್ರಧಾನಿಗೆ ಮಾಹಿತಿ ನೀಡಿದರು. ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ನೆರವು ಸಿಗುವಂತೆ ನೋಡಿಕೊಳ್ಳಲು ಪ್ರಧಾನಿ ಕರೆ ನೀಡಿದ್ದಾರೆ.
ಸಭೆಯಲ್ಲಿ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್, ಗೃಹ ಖಾತೆ ರಾಜ್ಯ ಸಚಿವ ಹರ್ಷ ಸಂಘವಿ, ಗುಜರಾತ್ ಮುಖ್ಯ ಕಾರ್ಯದರ್ಶಿ ಮತ್ತು ಡಿಜಿಪಿ ಉಪಸ್ಥಿತರಿದ್ದರು.
ಈ ನಡುವೆ ದುರಂತಕ್ಕೆ ಸಂಬಂಧಿಸಿದಂತೆ ಒಂಬತ್ತು ಜನರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಲ್ಲಿ ಸೇತುವೆಯನ್ನು ದುರಸ್ತಿ ಮಾಡಿದ ಕಂಪನಿಯ ಆಡಳಿತದ ಇಬ್ಬರು ವ್ಯಕ್ತಿಗಳು, ಟಿಕೆಟ್ ಕಲೆಕ್ಟರ್ಗಳು ಮತ್ತು ಸೇತುವೆ ದುರಸ್ತಿ ಗುತ್ತಿಗೆದಾರರು ಸೇರಿದ್ದಾರೆ ಎಂದು ರಾಜ್ಕೋಟ್ ರೇಂಜ್ ಐಜಿ ಅಶೋಕ್ ಕುಮಾರ್ ಯಾದವ್ ಮಾಧ್ಯಮಗಳಿಗೆ ತಿಳಿಸಿದ್ದಾರೆ. ವಿಶೇಷ ತನಿಖಾ ತಂಡದಿಂದ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.