ಬೆಂಗಳೂರು: ರಾಜ್ಯದಲ್ಲಿ ಒಟ್ಟು 29 ಹೊಸ ಸರ್ಕಾರಿ ಪದವಿ ಪೂರ್ವ ಕಾಲೇಜುಗಳನ್ನು ಘೋಷಣೆ ಮಾಡಲಾಗಿದೆ.
ರಾಜ್ಯದ ವಿವಿಧ ಜಿಲ್ಲೆ ಮತ್ತು ತಾಲೂಕುಗಳಲ್ಲಿ ಹೊಸ ಸರಕಾರಿ ಪದವಿ ಪೂರ್ವ ಕಾಲೇಜುಗಳು ಸ್ಥಾಪನೆಯಾಗಲಿದ್ದು, ರಾಜ್ಯ ಸರ್ಕಾರ ಮಂಜೂರಾತಿ ನೀಡಿ ಆದೇಶ ಹೊರಡಿಸಿದೆ.
ಒಟ್ಟು 25 ಪದವಿ ಪೂರ್ವ ಕಾಲೇಜುಗಳನ್ನು ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಆರಂಭಿಸಲು ನಿರ್ಧರಿಸಲಾಗಿದೆ.
ಉಳಿದ ಐದು ಕಾಲೇಜುಗಳ ಪೈಕಿ ಪದ್ಮಶ್ರೀ ಪುರಸ್ಕೃತ ಹರಕಳ ಹಾಜಬ್ಬ ಅವರ ಸಂಸ್ಥೆ ಸೇರಿದಂತೆ ಕರಾವಳಿ ಹಾಗೂ ಮಧ್ಯಕರ್ನಾಟಕ ಭಾಗದ ಕೆಲ ಜಿಲ್ಲೆಗಳಿಗೆ ನೀಡಲಾಗಿದೆ. ಈ ಎಲ್ಲ ಕಾಲೇಜುಗಳಲ್ಲಿ 2023-24ನೇ ಸಾಲಿನಿಂದ ಪ್ರವೇಶ ಪ್ರಕ್ರಿಯೆ ಆರಂಭವಾಗಲಿವೆ.
ರಾಜ್ಯ ಸರ್ಕಾರ, ರಾಜ್ಯದ ಕೆಲ ಪ್ರೌಢ ಶಾಲೆಗಳನ್ನು ಉನ್ನತೀಕರಿಸಿ ಅವುಗಳನ್ನು ಹೊಸ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಾಗಿ ಪ್ರಾರಂಭಿಸಲು ಮುಂದಾಗಿತ್ತು. ಈಗ ಇದರ ಭಾಗವಾಗಿ 29 ಹೊಸ ಪದವಿ ಪೂರ್ವ ಕಾಲೇಜುಗಳನ್ನು ಮಂಜೂರು ಮಾಡಲಾಗಿದೆ.
29 PU colleges sanctioned by Karnataka Govt
•Yadgir district -Surapura(2)
•Koppal district – Kanakagiri(2),Koppal(1)
•Raichur district – Sindhanur(1)
•Ballari district – Siruguppa(1)
•Vijayapura district – Devarahipparagi(2),
Muddebihal(1)— Karnataka Development Index (@IndexKarnataka) November 1, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.