ಅಹ್ಮದಾಬಾದ್: ಇಂದು ಗುಜರಾತಿಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ದುರಂತ ಸಂಭವಿಸಿದ ಮೋರ್ಬಿ ಸೇತುವೆಯ ಸ್ಥಳಕ್ಕೆ ಆಗಮಿಸಿದರು. ಈ ಸೇತುವೆ ಕುಸಿತವಾಗಿ ಸುಮಾರು 140 ಜನರು ಬಲಿಯಾಗಿದ್ದಾರೆ. ಅವರಲ್ಲಿ ಅನೇಕ ಮಹಿಳೆಯರು ಮತ್ತು ಮಕ್ಕಳು ಸೇರಿದ್ದಾರೆ, ಇನ್ನೂ ಹಲವಾರು ಜನರು ಕಾಣೆಯಾಗಿದ್ದಾರೆ.
ಶತಮಾನದಷ್ಟು ಹಳೆಯದಾದ ಸೇತುವೆ ಭಾನುವಾರ ಕುಸಿದಿದ್ದು, ಸುಮಾರು 400 ಜನರು ಸೇತುವೆಯ ಮೇಲೆ ಇದ್ದರು ಎನ್ನಲಾಗಿದೆ.
ಮಚ್ಚು ನದಿಯಲ್ಲಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿರುವ ವೇಳೆಯೇ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರೊಂದಿಗೆ ಮೋದಿ ಮೊರ್ಬಿಯಲ್ಲಿ ಘಟನಾ ಸ್ಥಳಕ್ಕೆ ಭೇಟಿ ನೀಡಿದರು.
ಮೋರ್ಬಿಯಲ್ಲಿ ಕೇಬಲ್ ಸೇತುವೆ ಕುಸಿತದ ದುರ್ಘಟನೆ ಸಂಭವಿಸಿದಾಗ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಯಲ್ಲಿ ತೊಡಗಿದ್ದ ವಿವಿಧ ಕೇಂದ್ರ ಮತ್ತು ರಾಜ್ಯ ಏಜೆನ್ಸಿಗಳ ಸಿಬ್ಬಂದಿಯನ್ನು ಪ್ರಧಾನಿ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
#WATCH | PM Modi along with Gujarat CM Bhupendra Patel visits the cable bridge collapse site in Morbi, Gujarat
135 people lost their lives in the tragic incident pic.twitter.com/pXJhV7aqyi
— ANI (@ANI) November 1, 2022
PM Modi today met persons who were involved in rescue and relief operations when the cable bridge collapse mishap struck Morbi. pic.twitter.com/O0Oy8NBscP
— ANI (@ANI) November 1, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.