ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಮಂಗಳವಾರ ಸಂಜೆ ಭದ್ರತಾ ಪಡೆಗಳೊಂದಿಗೆ ನಡೆದ ಎರಡು ಪ್ರತ್ಯೇಕ ಎನ್ಕೌಂಟರ್ಗಳಲ್ಲಿ ನಾಲ್ವರು ಭಯೋತ್ಪಾದಕರು ಹತರಾಗಿದ್ದಾರೆ.
ಪುಲ್ವಾಮಾ ಜಿಲ್ಲೆಯ ಅವಂತಿಪೋರಾ ಪ್ರದೇಶದ ಖಂಡಿಪೋರಾ ಗ್ರಾಮದಲ್ಲಿ ನಡೆದ ಎನ್ಕೌಂಟರ್ನಲ್ಲಿ ಹತರಾದ ಮೂವರು ಭಯೋತ್ಪಾದಕರಲ್ಲಿ ಲಷ್ಕರ್-ಎ-ತೊಯ್ಬಾ ಕಮಾಂಡರ್ ಮುಖ್ತಾರ್ ಅಹ್ಮದ್ ಸೇರಿದ್ದಾನೆ ಎಂದು ಕಾಶ್ಮೀರದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ವಿಜಯ್ ಕುಮಾರ್ ಹೇಳಿದ್ದಾರೆ.
ಎನ್ಕೌಂಟರ್ ಸ್ಥಳದಿಂದ ಒಂದು ಎಕೆ 47 ರೈಫಲ್, ಒಂದು ಎಕೆ 56 ರೈಫಲ್ ಮತ್ತು ಒಂದು ಪಿಸ್ತೂಲ್ ವಶಪಡಿಸಿಕೊಳ್ಳಲಾಗಿದೆ.
ಅನಂತನಾಗ್ ಜಿಲ್ಲೆಯ ಬಿಜ್ಬೆಹರಾ ಪ್ರದೇಶದ ಸೆಮ್ಥಾನ್ ಗ್ರಾಮದಲ್ಲಿ ನಡೆದ ಮತ್ತೊಂದು ಎನ್ಕೌಂಟರ್ನಲ್ಲಿ ಒಬ್ಬ ಭಯೋತ್ಪಾದಕನನ್ನು ಭದ್ರತಾ ಪಡೆಗಳು ಹತ್ಯೆ ಮಾಡಿವೆ.
ಮೂವರು ಹೈಬ್ರಿಡ್ ಭಯೋತ್ಪಾದಕರನ್ನು ಶ್ರೀನಗರ ಪೊಲೀಸರು ಬಂಧಿಸಿದ್ದಾರೆ ಮತ್ತು 10 ಕೆಜಿ ಬಕೆಟ್ ಐಇಡಿ ಮತ್ತು ಎರಡು ಹ್ಯಾಂಡ್ ಗ್ರೆನೇಡ್ಗಳನ್ನು ವಶಪಡಿಸಿಕೊಂಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.