ನವದೆಹಲಿ: ಇಬ್ಬರು ಸೇನಾ ಅಧಿಕಾರಿಗಳು ಸೇರಿದಂತೆ ಮೂವರನ್ನು ಬಲಿತೆಗೆದುಕೊಂಡ 2000 ರ ಕೆಂಪು ಕೋಟೆ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಲಕ್ಷರ್-ಎ-ತೊಯ್ಬಾ ಉಗ್ರ ಮೊಹಮ್ಮದ್ ಆರಿಫ್ಗೆ ನೀಡಲಾದ ಮರಣದಂಡನೆಯನ್ನು ಸುಪ್ರೀಂಕೋರ್ಟ್ ಇಂದು ಎತ್ತಿ ಹಿಡಿದಿದೆ.
ಅಪರಾಧಿಯ ಮರುಪರಿಶೀಲನಾ ಅರ್ಜಿಯನ್ನು ನ್ಯಾಯಾಲಯವು ತಿರಸ್ಕರಿಸಿದೆ.
“ವಿದ್ಯುನ್ಮಾನ ದಾಖಲೆಗಳನ್ನು ಪರಿಗಣನೆಯಿಂದ ಹೊರಗಿಡಬೇಕು ಎಂಬ ಮನವಿಗಳನ್ನು ನಾವು ಸ್ವೀಕರಿಸಿದ್ದೇವೆ. ಆದರೆ, ಸಂಪೂರ್ಣ ವಿಷಯಕ್ಕೆ ಸಂಬಂಧಿಸಿದಂತೆ ಅವರ ಅಪರಾಧ ಸಾಬೀತಾಗಿದೆ. ಈ ನ್ಯಾಯಾಲಯವು ತೆಗೆದುಕೊಂಡ ದೃಷ್ಟಿಕೋನವನ್ನು ನಾವು ದೃಢೀಕರಿಸುತ್ತೇವೆ ಮತ್ತು ಮರುಪರಿಶೀಲನಾ ಅರ್ಜಿಯನ್ನು ತಿರಸ್ಕರಿಸುತ್ತೇವೆ” ಭಾರತದ ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.