ಶಿಮ್ಲಾ: ಸ್ವತಂತ್ರ ಭಾರತದ ಮೊಟ್ಟ ಮೊದಲ ಮತದಾರ ಎಂಬ ಹೆಗ್ಗಳಿಕೆ ಹೊಂದಿರುವ 106 ವರ್ಷದ ಶ್ಯಾಮ್ ಶರಣ್ ನೇಗಿ ಅವರು ಇಂದು ಹಿಮಾಚಲ ಪ್ರದೇಶದ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಮತದಾನ ಮಾಡಿದ್ದಾರೆ. ಇದು ಅವರ 34ನೇ ಮತದಾನ.
ಇವರು ಭಾರತದ ಮೊದಲ ಸಾರ್ವತ್ರಿಕ ಚುನಾವಣೆಯಲ್ಲಿ ಮತದಾನದ ಹಕ್ಕು ಚಲಾಯಿಸಿದ ಮೊದಲ ಮತದಾರ. ಇವರು ಹಿಮಾಚಲ ಪ್ರದೇಶದ ಬುಡಕಟ್ಟು ಕಿನ್ನೌರ್ ಜಿಲ್ಲೆಯ ನಿವಾಸಿ. ವೃತ್ತಿಯಲ್ಲಿ ಶಿಕ್ಷಕರಾಗಿದ್ದರು.
14ನೇ ಹಿಮಾಚಲ ಪ್ರದೇಶದ ವಿಧಾನಸಭಾ ಚುನಾವಣೆಗೆ ಕಲ್ಪದಲ್ಲಿರುವ ತಮ್ಮ ಮನೆಯಲ್ಲಿ ಅಂಚೆ ಮೂಲಕ ಮತದಾನದ ಹಕ್ಕು ಚಲಾಯಿಸಿದ್ದಾರೆ.
1917ರ ಜುಲೈನಲ್ಲಿ ಜನಿಸಿದ ನೇಗಿ ಅವರು 1951 ರಲ್ಲಿ ಭಾರತದ ಮೊದಲ ಸಾರ್ವತ್ರಿಕ ಚುನಾವಣೆಯಲ್ಲಿ ಮೊದಲ ಬಾರಿಗೆ ಮತ ಚಲಾಯಿಸಿದ್ದರು. ಇವರು ಲೋಕಸಭೆಗೆ 16 ಬಾರಿ ಮತ ಚಲಾಯಿಸಿದ್ದಾರೆ. 1951 ರ ನಂತರ ಪ್ರತಿ ಲೋಕಸಭೆ ವಿಧಾನಸಭೆ ಮತ್ತು ಎಲ್ಲಾ ಸ್ಥಳೀಯ ಸಂಸ್ಥೆಗಳಿಗೆ ಅವರು ಮತ ಚಲಾಯಿಸುತ್ತಲೇ ಬಂದಿದ್ದಾರೆ.
ಇವರನ್ನು ಹಿಮಾಚಲ ಪ್ರದೇಶದ ರಾಜ್ಯ ಚುನಾವಣೆಯ ಐಕಾನ್ ಎಂದು ಗುರುತಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.