ಅಹಮದಾಬಾದ್: ಮುಂಬರುವ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲಲು ಅವಿರತ ಹೋರಾಟ ನಡೆಸುತ್ತಿರುವ ಆಮ್ಆದ್ಮಿ ಪಕ್ಷ ಅಲ್ಲಿನ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಇಸುದನ್ ಗಡ್ವಿ ಅವರನ್ನು ಆಯ್ಕೆ ಮಾಡಿದೆ.
ಆಡಳಿತಾರೂಢ ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸಲು ಆಮ್ ಆದ್ಮಿ ಪಕ್ಷವು ಆಕ್ರಮಣಕಾರಿ ಪ್ರಚಾರ ನಡೆಸುತ್ತಿದೆ. ಈ ನಡುವೆ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಮಾಜಿ ಟಿವಿ ನಿರೂಪಕ ಇಸುದನ್ ಗಡ್ವಿ ಅವರ ಹೆಸರನ್ನು ಘೋಷಣೆ ಮಾಡಲಾಗಿದೆ.
ಮಾಜಿ ಪತ್ರಕರ್ತ ಮತ್ತು ಟಿವಿ ನಿರೂಪಕ ಇಸುದನ್ ಗಡ್ವಿ ಅವರು ಗುಜರಾತ್ ಮುಖ್ಯಮಂತ್ರಿ ಯಾರಾಗಬೇಕು ಎಂಬುದರ ಕುರಿತು ಎಎಪಿ ಸಮೀಕ್ಷೆಯಲ್ಲಿ ಶೇಕಡಾ 73 ರಷ್ಟು ಮತಗಳನ್ನು ಗಳಿಸಿದ್ದಾರೆ.
ಜನರ ಅಭಿಪ್ರಾಯ ಸಂಗ್ರಹಣೆಯ ಮೂಲಕ ಇಸುದನ್ ಗಡ್ವಿ ಅವರನ್ನು ಸಿಎಂ ಅಭ್ಯರ್ಥಿಯಾಗಿ ಘೋಷಣೆ ಮಾಡಿರುವುದಾಗಿ ಆಮ್ ಆದ್ಮಿ ಪಾರ್ಟಿಯ ರಾಷ್ಟ್ರೀಯ ಸಂಚಾಲ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
ಪ್ರಸ್ತುತ ಇಸುದನ್ ಗಡ್ವಿ ರಾಷ್ಟ್ರೀಯ ಜಂಟಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ
ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಗಡ್ವಿ ಅವರಲ್ಲದೆ, ಎಎಪಿಯ ರಾಜ್ಯ ಘಟಕದ ಅಧ್ಯಕ್ಷ ಗೋಪಾಲ್ ಇಟಾಲಿಯಾ ಮತ್ತು ಪ್ರಧಾನ ಕಾರ್ಯದರ್ಶಿ ಮನೋಜ್ ಸೊರತಿಹ್ಯ ಕೂಡ ಮುಖ್ಯಮಂತ್ರಿ ಅಭ್ಯರ್ಥಿಯಾಗುವ ರೇಸ್ನಲ್ಲಿದ್ದರು. ಕೇಜ್ರಿವಾಲ್ ಅಹಮದಾಬಾದ್ನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಹೆಸರನ್ನು ಘೋಷಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.