ಚೆಂಗ್ಜು: ದಕ್ಷಿಣ ಕೊರಿಯಾದಲ್ಲಿ ನಡೆದ ಏಷ್ಯನ್ ಸ್ಕ್ವಾಷ್ ಚಾಂಪಿಯನ್ಶಿಪ್ ಕ್ರೀಡಾಕೂಟದಲ್ಲಿ ಭಾರತೀಯ ಪುರುಷರ ತಂಡವು ಚಾಂಪಿಯನ್ ಆಗಿ ಹೊರಹೊಮ್ಮಿದೆ. ಈ ಮೂಲಕ ಐತಿಹಾಸಿಕ ಸಾಧನೆಯನ್ನು ಮಾಡಿದೆ.
ಇಂದು ನಡೆದ ಫೈನಲ್ ಪಂದ್ಯದಲ್ಲಿ ಕುವೈಟ್ ಅನ್ನು 2-0ಯಿಂದ ಸೋಲಿಸುವ ಮೂಲಕ ಭಾರತ ಇದೆ ಮೊದಲ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿದೆ.
ಹಿಂದಿನ ಎರಡು ಆವೃತ್ತಿಗಳಲ್ಲಿ ಭಾರತ ಬೆಳ್ಳಿ ಪದಕವನ್ನು ಜಯಿಸಿತ್ತು. ಆದರೆ ಈ ಬಾರಿ ಕಠಿಣ ಪರಿಶ್ರಮದ ಮೂಲಕ ಬಂಗಾರದ ಪದಕವನ್ನು ತನ್ನದಾಗಿಸಿದೆ.
ಈ ಕ್ರೀಡಾಕೂಟದಲ್ಲಿ ಭಾರತೀಯ ಮಹಿಳಾ ತಂಡವು ಸೆಮಿ ಫೈನಲ್ ನಲ್ಲಿ ಮಲೇಶಿಯಾ ವಿರುದ್ಧ ಸೋತ ಕಾರಣ ಕಂಚಿನ ಪದಕವನ್ನು ತನ್ನದಾಗಿಸಿಕೊಂಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.