ಶ್ರೀನಗರ: ಭಯೋತ್ಪಾದನೆಗೆ ಹಣಕಾಸು ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಶ್ಮೀರಿ ಪ್ರತ್ಯೇಕತಾವಾದಿ ನಾಯಕ ಶಬೀರ್ ಅಹ್ಮದ್ ಶಾ ಹೆಸರಿನಲ್ಲಿರುವ ಸ್ಥಿರಾಸ್ತಿಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಜಪ್ತಿ ಮಾಡಿದೆ.
ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ಚಟುವಟಿಕೆಗಳಿಗೆ ಆರ್ಥಿಕ ನೆರವು ನೀಡಿದ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಕಾಶ್ಮೀರ ಪ್ರತ್ಯೇಕತಾವಾದಿ ನಾಯಕ ಶಬೀರ್ ಅಹ್ಮದ್ ಶಾನ ಶ್ರೀನಗರದ ಮನೆ ಸೇರಿದಂತೆ ಸ್ಥಿರಾಸ್ತಿಯನ್ನು ಜಪ್ತಿ ಮಾಡಿರುವುದಾಗಿ ಜಾರಿ ನಿರ್ದೇಶನಾಲಯ ಶುಕ್ರವಾರ ಘೋಷಿಸಿದೆ.
ರೂ 21.80 ಲಕ್ಷ ಮೌಲ್ಯದ ಆಸ್ತಿ ಶ್ರೀನಗರದ ಬೋತ್ಶಾ ಕಾಲೋನಿಯಲ್ಲಿದೆ ಎಂದು ಸಂಸ್ಥೆ ತಿಳಿಸಿದೆ. ಕಲ್ಲು ತೂರಾಟ, ಮೆರವಣಿಗೆಗಳು, ಪ್ರತಿಭಟನೆಗಳು, ಬಂದ್ಗಳು, ಹರ್ತಾಲ್ಗಳು ಮತ್ತು ಇತರ ವಿಧ್ವಂಸಕ ಚಟುವಟಿಕೆಗಳ ಮೂಲಕ ಕಾಶ್ಮೀರ ಕಣಿವೆಯಲ್ಲಿ ಅಶಾಂತಿಯನ್ನು ಹೆಚ್ಚಿಸುವ ಚಟುವಟಿಕೆಗಳಲ್ಲಿ ಈತ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾನೆ ಎಂದು ಇಡಿ ಆರೋಪಿಸಿದೆ.
ಲಷ್ಕರ್-ಎ-ತೊಯ್ಬಾ ಮುಖ್ಯಸ್ಥ ಹಫೀಜ್ ಸಯೀದ್ ಮತ್ತು ಇತರರ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ(ಯುಎಪಿಎ)ಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಈ ಎಫ್ಐಆರ್ ನಲ್ಲಿ ಶಾ ಹೆಸರು ಕೂಡ ಉಲ್ಲೇಖವಾಗಿದ್ದರಿಂದ ಅವನ ವಿರುದ್ಧ ಹಣಕಾಸು ವಂಚನೆ ಪ್ರಕರಣ ದಾಖಲಿಸಲಾಗಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.