ನವದೆಹಲಿ: ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ಇಂದು ಹೊಸ ಸಂಸತ್ ಭವನದ ನಿರ್ಮಾಣ ಸ್ಥಳಕ್ಕೆ ಭೇಟಿ ನೀಡಿ ಯೋಜನೆಯ ಪ್ರಗತಿಯನ್ನು ಪರಿಶೀಲಿಸಿದ್ದಾರೆ ಮತ್ತು ಕಾಮಗಾರಿ ಸ್ಥಿರವಾದ ವೇಗದಲ್ಲಿ ಪ್ರಗತಿಯಲ್ಲಿದೆ ಎಂದು ಹೇಳಿದ್ದಾರೆ.
ನಿರ್ಮಾಣ ಹಂತದಲ್ಲಿರುವ ಕಟ್ಟಡದ ಕೆಲವು ಚಿತ್ರಗಳನ್ನು ಸಚಿವರು ಟ್ವಿಟರ್ನಲ್ಲಿ ಹಂಚಿಕೊಂಡಿದ್ದಾರೆ.
ನವೆಂಬರ್ ವೇಳೆಗೆ ಯೋಜನೆ ಪೂರ್ಣಗೊಳ್ಳಲಿದ್ದು, ಸಂಸತ್ತಿನ ಚಳಿಗಾಲದ ಅಧಿವೇಶನವನ್ನು ಹೊಸ ಕಟ್ಟಡದಲ್ಲಿ ನಡೆಸಲಾಗುವುದು ಎಂದು ಸರ್ಕಾರ ಹೇಳಿದೆ.
”ಹೊಸ ಸಂಸತ್ ಭವನದಲ್ಲಿ ನಡೆಯುತ್ತಿರುವ ನಿರ್ಮಾಣ ಕಾಮಗಾರಿಯನ್ನು ಇಂದು ಪರಿಶೀಲಿಸಲಾಯಿತು. ಕಾಮಗಾರಿ ಸ್ಥಿರ ಗತಿಯಲ್ಲಿ ಸಾಗುತ್ತಿದೆ. ಭಾರತದ ಪ್ರಾಚೀನ ಸಾಂಸ್ಕೃತಿಕ ಪರಂಪರೆಯಿಂದ ಪ್ರೇರಿತವಾದ ವಾಸ್ತುಶಿಲ್ಪದ ಅಂಶಗಳೊಂದಿಗೆ ಸುಸ್ಥಿರ ಅತ್ಯಾಧುನಿಕ ಕಟ್ಟಡ ಇದಾಗಿದೆ” ಎಂದು ಪುರಿ ಟ್ವೀಟ್ ಮಾಡಿದ್ದಾರೆ.
ನೂತನ ಸಂಸತ್ ಭವನ ನಿರ್ಮಾಣಕ್ಕಾಗಿ 4,000ಕ್ಕೂ ಹೆಚ್ಚು ಜನರು ಹಗಲಿರುಳು ಶ್ರಮಿಸುತ್ತಿದ್ದಾರೆ ಎಂದಿದ್ದಾರೆ.
Reviewed ongoing construction at the New Parliament Building today. Work is progressing at a steady pace. Sustainable state-of-the-art building with architectural elements inspired by India’s ancient cultural heritage. Modernity meets tradition. pic.twitter.com/mSPxV8s74j
— Hardeep Singh Puri (@HardeepSPuri) November 5, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.