ಬೆಂಗಳೂರು: ಧರ್ಮ ಜಾಗರಣ ಸಮನ್ವಯ ಪರಿಯೋಜನಾ ಪ್ರಮುಖ್ ಭಾಸ್ಕರದಾಸ್ ಎಕ್ಕಾರು ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅವರು ‘ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಮುಖರು, ರಾಜ್ಯದಲ್ಲಿ ಅಲೆಮಾರಿ ಜನಾಂಗದ ಶ್ರೇಯಸ್ಸಿಗಾಗಿ ಸೇವೆ ಸಲ್ಲಿಸುತಿದ್ದ ಶ್ರೀ ಭಾಸ್ಕರ್ ದಾಸ್ ಎಕ್ಕಾರು ಅವರು ನಿಧನರಾದ ವಿಷಯ ತಿಳಿದು ತುಂಬಾ ದುಃಖಿತನಾಗಿದ್ದೇನೆ. ಭಗವಂತನು ಅವರ ಆತ್ಮಕ್ಕೆ ಸದ್ಗತಿ ನೀಡಿ, ಅವರ ಕುಟುಂಬಕ್ಕೆ ಈ ದು:ಖ ಭರಿಸುವ ಶಕ್ತಿ ಕರುಣಿಸಲಿಯೆಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿಃ’ ಎಂದು ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.
ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಮುಖರು, ರಾಜ್ಯದಲ್ಲಿ ಅಲೆಮಾರಿ ಜನಾಂಗದ ಶ್ರೇಯಸ್ಸಿಗಾಗಿ ಸೇವೆ ಸಲ್ಲಿಸುತಿದ್ದ ಶ್ರೀ ಭಾಸ್ಕರ್ ದಾಸ್ ಎಕ್ಕಾರು ಅವರು ನಿಧನರಾದ ವಿಷಯ ತಿಳಿದು ತುಂಬಾ ದುಃಖಿತನಾಗಿದ್ದೇನೆ. ಭಗವಂತನು ಅವರ ಆತ್ಮಕ್ಕೆ ಸದ್ಗತಿ ನೀಡಿ, ಅವರ ಕುಟುಂಬಕ್ಕೆ ಈ ದು:ಖ ಭರಿಸುವ ಶಕ್ತಿ ಕರುಣಿಸಲಿಯೆಂದು ಪ್ರಾರ್ಥಿಸುತ್ತೇನೆ.
ಓಂ ಶಾಂತಿಃ pic.twitter.com/quyuOm1aN0
— Basavaraj S Bommai (@BSBommai) November 7, 2022
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್ ಅವರು ಸಂತಾಪ ಸೂಚಿಸಿದ್ದು, ಮೃತರ ಆತ್ಮಕ್ಕೆ ಶಾಂತಿ ಕೋರಿದ್ದಾರೆ. ಡಿ. ದೇವರಾಜ ಅರಸು ಪ್ರಶಸ್ತಿ ಪುರಸ್ಕೃತರಾದ ಭಾಸ್ಕರದಾಸ್ ಅವರು, ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಎರಡು ವರ್ಷಗಳ ಹಿಂದೆ ನಡೆದ ಬ್ರಹ್ಮಕಲಶೋತ್ಸವದಲ್ಲಿ ಪೂರ್ಣ ಪ್ರಮಾಣದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಎಕ್ಕಾರು ಗ್ರಾಮ ಪಂಚಾಯಿತಿಯ ಸದಸ್ಯರಾಗಿಯೂ ಕಾರ್ಯ ನಿರ್ವಹಿಸಿದ್ದರು. ಅಲೆಮಾರಿ ಜನಾಂಗದ ಶ್ರೇಯೋಭಿವೃದ್ಧಿಗೆ ಅವರು ಹೋರಾಟ ಮಾಡಿದ್ದರು ಎಂದು ಸ್ಮರಿಸಿದ್ದಾರೆ. ಅವರ ಕುಟುಂಬದವರು, ಬಂಧುಮಿತ್ರರು ಮತ್ತು ಅಭಿಮಾನಿಗಳಿಗೆ ಹಿರಿಯರ ಅಗಲಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ಆ ಪರಮಾತ್ಮನು ನೀಡಲಿ ಎಂದು ಪ್ರಾರ್ಥಿಸಿದ್ದಾರೆ.
ಆರೆಸ್ಸೆಸ್ ಕರ್ನಾಟಕ ದಕ್ಷಿಣ ಪ್ರಾಂತ್ಯದ ಧರ್ಮ ಜಾಗರಣದ ಸಮನ್ವಯ ಪರಿಯೋಜನಾ ಪ್ರಮುಖ್, ಅಲೆಮಾರಿ ಜನಾಂಗದ ಶ್ರೇಯಸ್ಸಿಗಾಗಿ ಸೇವೆ ಸಲ್ಲಿಸಿದ, ಕೃಷಿಕರೂ, ನನ್ನ ಆತ್ಮೀಯ ಮಿತ್ರರಾದ ಶ್ರೀ ಭಾಸ್ಕರ್ ದಾಸ್ ಎಕ್ಕಾರ್ ಅವರ ಆತ್ಮಕ್ಕೆ ಸದ್ಗತಿ ಕೋರುತ್ತಾ, ಅವರ ಕುಟುಂಬಕ್ಕೆ, ಹಿತೈಷಿಗಳಿಗೆ ಭಗವಂತ ಈ ದು:ಖ ಭರಿಸುವ ಶಕ್ತಿ ಕರುಣಿಸಲಿ ಎಂದು ಪ್ರಾರ್ಥನೆ. pic.twitter.com/U6WkQJC9VS
— Nalinkumar Kateel (@nalinkateel) November 6, 2022
ಭಾಸ್ಕರದಾಸ್ ಎಕ್ಕಾರು ಅವರ ಅಕಾಲಿಕ ನಿಧನಕ್ಕೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕ್ಷೇತ್ರೀಯ ಸಂಘಚಾಲಕ ವಿ. ನಾಗರಾಜ್, ಕ್ಷೇತ್ರೀಯ ಕಾರ್ಯವಾಹ ನಾ. ತಿಪ್ಪೇಸ್ವಾಮಿ ತೀವ್ರ ಸಂತಾಪ ಸೂಚಿಸಿದ್ದಾರೆ.
ಅಲೆಮಾರಿ ಸಮುದಾಯಗಳ ಹೋರಾಟಗಾರ, ಕೇಂದ್ರಸರಕಾರದ ಅಲೆಮಾರಿ, ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ನಿರ್ದೇಶಕ ಶ್ರೀ ಭಾಸ್ಕರದಾಸ್ ಎಕ್ಕಾರು ಇಂದು ನಿಧನರಾಗಿದ್ದು, ರಾಷ್ಟ್ರೀಯ ಸ್ವಯಂಸೇವಕ ಸಂಘದ ಕ್ಷೇತ್ರೀಯ ಸಂಘಚಾಲಕ ವಿ. ನಾಗರಾಜ್, ಕ್ಷೇತ್ರೀಯ ಕಾರ್ಯವಾಹ ನಾ. ತಿಪ್ಪೇಸ್ವಾಮಿ ತೀವ್ರ ಸಂತಾಪ ಸೂಚಿಸಿದ್ದಾರೆ.https://t.co/onwxUlzDp6 pic.twitter.com/jeM46o134y
— VSK Karnataka ವಿಸಂಕೇಂ ಕರ್ನಾಟಕ (@VSKKarnataka) November 6, 2022
ಭಾಸ್ಕರ್ ದಾಸ್ ಎಕ್ಕಾರು ಅವರು ಅಲೆಮಾರಿ ಸಮುದಾಯಗಳ ಹೋರಾಟಗಾರ, ಕೇಂದ್ರ ಸರ್ಕಾರದ ಅಲೆಮಾರಿ, ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ. ಕುಣಿಗಲ್ ಸಮೀಪ ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದು, ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದ್ದಾರೆ. ಇಂದು ಎಕ್ಕಾರಿನ ಅವರ ಕೃಷಿ ಭೂಮಿಯಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.