ಬೆಂಗಳೂರು: ಭಾರತ ಜೋಡೋ ಯಾತ್ರೆಯಲ್ಲಿ ಕೆಜಿಎಫ್ ಚಾಪ್ಟರ್ 2 ಸಿನಿಮಾದ ಹಾಡುಗಳನ್ನು ಬಳಸಿಕೊಂಡಿರುವ ಸಂಬಂಧ ನವೆಂಬರ್ 21ರವರೆಗೆ ಐಎನ್ಸಿ ಇಂಡಿಯಾ ಮತ್ತು ಭಾರತ್ ಜೋಡೋ ಯಾತ್ರೆಯ ಟ್ವಿಟರ್ ಖಾತೆಗಳನ್ನು ತಾತ್ಕಾಲಿಕವಾಗಿ ನಿರ್ಬಂಧಿಸುವಂತೆ ಬೆಂಗಳೂರು ವಾಣಿಜ್ಯ ನ್ಯಾಯಾಲಯ ಮಧ್ಯಂತರ ಆದೇಶ ನೀಡಿದೆ.
ಕೆಜಿಎಫ್ ಚಿತ್ರದ ಸಂಗೀತದ ಹಕ್ಕು ಸ್ವಾಮ್ಯ ಪಡೆದುಕೊಂಡಿರುವ ಎಂಆರ್ಟಿ ಮ್ಯೂಸಿಕ್ ಕಂಪನಿ ದಾಖಲಿಸಿರುವ ದಾವೆಯನ್ನು ವಿಚಾರಣೆ ನಡೆಸಿರುವ ನಗರದ 86ನೇ ವಾಣಿಜ್ಯ ನ್ಯಾಯಾಲಯ ಈ ಆದೇಶ ನೀಡಿದ್ದು ವಿಚಾರಣೆಯನ್ನು ಮುಂದೂಡಿದೆ.
ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ಕೆಜಿಎಫ್ ಚಿತ್ರದ ಸಂಗೀತವನ್ನು ಅನಧಿಕೃತವಾಗಿ ಬಳಕೆ ಮಾಡಿಕೊಂಡಿರುವುದು ಸಾಬೀತಾಗಿದೆ. ಇಂತಹ ಬೆಳವಣಿಗೆಯನ್ನು ತಡೆಯದೆ ಹೋದರೆ ಅರ್ಜಿದಾರರಿಗೆ ಸಾಕಷ್ಟು ಹಾನಿ ಉಂಟಾಗುತ್ತದೆ ಮತ್ತು ಪೈರಸಿಯನ್ನು ಪ್ರೋತ್ಸಾಹಿಸಿದಂತಾಗುತ್ತದೆ ಎಂದು ನ್ಯಾಯಾಧೀಶರು ಅಭಿಪ್ರಾಯಪಟ್ಟಿದ್ದಾರೆ.
ಐಎನ್ಸಿ ಇಂಡಿಯಾದ ಟ್ವಿಟರ್ ಮತ್ತು ಭಾರತ್ ಜೋಡೋ ಯಾತ್ರೆಯ ಟ್ವಿಟರ್, ಫೇಸ್ಬುಕ್, ಯೂಟ್ಯೂಬ್, ಇನ್ಸ್ಟಾಗ್ರಾಮ್ ಸಾಮಾಜಿಕ ಜಾಲತಾಣದ ಅಧಿಕೃತ ಖಾತೆಯಲ್ಲಿರುವ ಹಕ್ಕು ಸ್ವಾಮ್ಯ ಮತ್ತು ಬೌದ್ಧಿಕ ಆಸ್ತಿ ಹಕ್ಕು ಸಂಬಂಧಿಸಿದ ಸಾಮಗ್ರಿಗಳನ್ನು ವಿದ್ಯುನ್ಮಾನ ಪರಿಶೋಧನೆ ನಡೆಸಲು ವಾಣಿಜ್ಯ ನ್ಯಾಯಾಲಯದ ಕಂಪ್ಯೂಟರ್ ವಿಭಾಗದ ಜಿಲ್ಲಾ ಸಿಸ್ಟಮ್ ಆಡಳಿತ ಅಧಿಕಾರಿಯಾಗಿರುವ ಎಸ್ ಎನ್ ವೆಂಕಟೇಶಮೂರ್ತಿ ಅವರನ್ನು ಸ್ಥಳೀಯ ಕಮಿಷನರ್ ಆಗಿ ನೇಮಕ ಮಾಡಿ ನ್ಯಾಯಾಲಯ ಆದೇಶ ಹೊರಡಿಸಿದೆ.
We have read on social media about an adverse order from a Bengaluru court against INC & BJY SM handles.
We were neither made aware of nor present at court proceedings. No copy of the order has been received.
We are pursuing all the legal remedies at our disposal.
— Congress (@INCIndia) November 7, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.