ನವದೆಹಲಿ: ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರು ಇಂದು ರಷ್ಯಾದ ವಿದೇಶಾಂಗ ಸಚಿವ ಸೆರ್ಗೆಯ್ ಲಾವ್ರೊವ್ ಅವರೊಂದಿಗೆ ಮಾತುಕತೆ ನಡೆಸಿದರು ಮತ್ತು ರಷ್ಯಾ-ಉಕ್ರೇನ್ ಯುದ್ಧ ಸೇರಿದಂತೆ ದ್ವಿಪಕ್ಷೀಯ, ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಕುರಿತು ಚರ್ಚಿಸಿದರು.
“ಉಕ್ರೇನ್ ಸಂಘರ್ಷದ ಪರಿಣಾಮಗಳನ್ನು ಜಗತ್ತು ಈಗ ನೋಡುತ್ತಿದೆ. ಇಂದಿನ ಸಭೆಯು ಭಾರತ-ರಷ್ಯಾ ದ್ವಿಪಕ್ಷೀಯ ಸಹಕಾರದ ಸ್ಥಿತಿಯನ್ನು ನಿರ್ಣಯಿಸಲು ಮೀಸಲಾಗಿದೆ. ಅಂತರಾಷ್ಟ್ರೀಯ ಪರಿಸ್ಥಿತಿಯ ದೃಷ್ಟಿಕೋನಗಳನ್ನು ವಿನಿಮಯ ಮಾಡಿಕೊಳ್ಳುವುದು ನಮ್ಮ ಉದ್ದೇಶ” ಎಂದಿದ್ದಾರೆ.
ಉಕ್ರೇನ್-ರಷ್ಯಾ ಯುದ್ಧದ ಕುರಿತು ಜೈಶಂಕರ್ ಅವರು ಇಂದು “ಸಂವಾದಕ್ಕೆ ಮರಳುವುದನ್ನು ಭಾರತವು ಬಲವಾಗಿ ಪುನರುಚ್ಚರಿಸುತ್ತದೆ” ಎಂದು ಹೇಳಿದ್ದಾರೆ.
“ಅಂತರರಾಷ್ಟ್ರೀಯ ಪರಿಸ್ಥಿತಿಗೆ ಸಂಬಂಧಿಸಿದಂತೆ, ಕಳೆದ ಕೆಲವು ವರ್ಷಗಳಿಂದ ಕೋವಿಡ್ ಸಾಂಕ್ರಾಮಿಕ, ಹಣಕಾಸಿನ ಒತ್ತಡಗಳು ಮತ್ತು ವ್ಯಾಪಾರ ತೊಂದರೆಗಳು ಎದುರಾದವು. ಇವುಗಳು ಜಾಗತಿಕ ಆರ್ಥಿಕತೆಯ ಮೇಲೆ ಪರಿಣಾಮ ಬೀರಿವೆ. ನಾವು ಈಗ ಉಕ್ರೇನ್ ಸಂಘರ್ಷದ ಪರಿಣಾಮಗಳನ್ನು ನೋಡುತ್ತಿದ್ದೇವೆ” ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.