ನವದೆಹಲಿ: ಮುಂಬರುವ ಗುಜರಾತ್ ವಿಧಾನಸಭೆ ಚುನಾವಣೆ 2022ಕ್ಕೆ ಬಿಜೆಪಿ ಇಂದು ತನ್ನ 160 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಪಟ್ಟಿಯಲ್ಲಿ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಮತ್ತು ಕ್ರಿಕೆಟಿಗ ರವೀಂದ್ರ ಜಡೇಜಾ ಅವರ ಪತ್ನಿ ರಿವಾಬಾ ಸೇರಿದಂತೆ ಇತರರ ಹೆಸರುಗಳಿವೆ.
ಪಟ್ಟಿಯ ಪ್ರಕಾರ ಸಿಎಂ ಭೂಪೇಂದ್ರ ಪಟೇಲ್ ಘಟ್ಲೋಡಿಯಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ.
ಜಂಟಿ ಪತ್ರಿಕಾಗೋಷ್ಠಿಯಲ್ಲಿ ಕೇಂದ್ರ ಸಚಿವರಾದ ಮನ್ಸುಖ್ ಮಾಂಡವಿಯಾ, ಭೂಪೇಂದರ್ ಯಾದವ್ ಮತ್ತು ರಾಜ್ಯ ಬಿಜೆಪಿ ಮುಖ್ಯಸ್ಥ ಸಿಆರ್ ಪಾಟೀಲ್ ಅವರು ಅಭ್ಯರ್ಥಿಗಳ ಹೆಸರನ್ನು ಘೋಷಿಸಿದರು. ಕ್ರಿಕೆಟಿಗ ರವೀಂದ್ರ ಜಡೇಜಾ ಅವರ ಪತ್ನಿ ರಿವಾಬಾ ಜಡೇಜಾ ಅವರಿಗೆ ಟಿಕೆಟ್ ಸಿಕ್ಕಿದ್ದು, ಅವರು ಜಾಮ್ನಗರ ಉತ್ತರ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.
ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಮಾಜಿ ನಾಯಕ ಹಾರ್ದಿಕ್ ಪಟೇಲ್ ಅವರು ವಿರಾಮಗಾಂ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ಗುಜರಾತ್ ಗೃಹ ಸಚಿವ ಹರ್ಷ ಸಂಘವಿ ಅವರು ಮಜುರಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ.
ಡಿಸೆಂಬರ್ 1 ಮತ್ತು 5 ರಂದು ಎರಡು ಹಂತಗಳಲ್ಲಿ ನಡೆಯಲಿರುವ ಗುಜರಾತ್ ವಿಧಾನಸಭೆ ಚುನಾವಣೆಗೆ ನವದೆಹಲಿಯ ಪಕ್ಷದ ಕೇಂದ್ರ ಕಚೇರಿಯಲ್ಲಿ ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿಯು ನಡೆಸಿದ ಸಭೆಯ ಒಂದು ದಿನದ ನಂತರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಇಲ್ಲಿ ಚರ್ಚಿಸಿ ಹೆಸರುಗಳನ್ನು ನಿರ್ಧರಿಸಲಾಗಿದೆ.
ರಾಜ್ಯದ 89 ವಿಧಾನಸಭಾ ಸ್ಥಾನಗಳಿಗೆ ಡಿಸೆಂಬರ್ 1 ರಂದು ಮತ್ತು 93 ಸ್ಥಾನಗಳಿಗೆ ಡಿಸೆಂಬರ್ 5 ರಂದು ಮತದಾನ ನಡೆಯಲಿದೆ. ರಾಜ್ಯದ ಮೊದಲ ಹಂತದ ಚುನಾವಣೆಯಲ್ಲಿ 89 ವಿಧಾನಸಭಾ ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಸಲು ನವೆಂಬರ್ 14 ಮತ್ತು 93 ವಿಧಾನಸಭಾ ಸ್ಥಾನಗಳಿಗೆ ನಾಮಪತ್ರ ಸಲ್ಲಿಸಲು ನವೆಂಬರ್ 17 ಕೊನೆಯ ದಿನಾಂಕವಾಗಿದೆ.
BJP announces names of candidates from 160 constituencies to contest in #GujaratAssemblyPolls pic.twitter.com/1giiv3ePI3
— ANI (@ANI) November 10, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.