ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ನಾಳೆ ಬೆಂಗಳೂರಿಗೆ ಆಗಮಿಸಲಿದ್ದು, ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಆವರಣದಲ್ಲಿ ನಿರ್ಮಾಣವಾಗಿರುವ ನಾಡಪ್ರಭು ಕೆಂಪೇಗೌಡ ಅವರ 108 ಅಡಿ ಎತ್ತರದ ಕಂಚಿನ ಪ್ರತಿಮೆಯನ್ನು ಉದ್ಘಾಟನೆ ಮಾಡಲಿದ್ದಾರೆ. ಅಲ್ಲದೇ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ಉದ್ಘಾಟನೆ ಮಾಡಲಿದ್ದಾರೆ.
ಮೋದಿ ಆಗಮನದ ಹಿನ್ನೆಲೆಯಲ್ಲಿ ಸಿದ್ಧತೆಗಳು ಭರದಿಂದ ಸಾಗುತ್ತಿದೆ. ಬಿಗಿ ಭದ್ರತಾ ಕ್ರಮಗಳನ್ನು ಅಳವಡಿಸಲಾಗಿದೆ.
ಬೆಳಿಗ್ಗೆ 10 ಗಂಟೆ ಸುಮಾರಿಗೆ ಪ್ರಧಾನಿ ನರೇಂದ್ರ ಮೋದಿ ಬೆಂಗಳೂರು ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ವಿಧಾನಸೌಧಕ್ಕೆ ರಸ್ತೆ ಮೂಲಕ ಪ್ರಯಾಣಿಸಲಿದ್ದಾರೆ. ಬಳಿಕ ಶಾಸಕರ ಭವನದ ಆವರಣದಲ್ಲಿರುವ ಕನಕದಾಸ ಪ್ರತಿಮೆಗೆ ಮಾಲಾರ್ಪಣೆ, ಸಂತ ವಾಲ್ಮೀಕಿ ಪ್ರತಿಮೆಗೆ ಮಾಲಾರ್ಪಣೆ ಮಾಡಲಿದ್ದಾರೆ.
ಬಳಿಕ ವಿಧಾನಸೌಧದಿಂದ ಸಂಗೊಳ್ಳಿ ರಾಯಣ್ಣ ರೈಲ್ವೇ ನಿಲ್ದಾಣಕ್ಕೆ ತೆರಳಿ ವಂದೇ ಭಾರತ್ ರೈಲಿಗೆ ಹಸಿರು ನಿಶಾನೆ ತೋರಿಸಲಿದ್ದಾರೆ. ನಂತರ ಏರ್ಫೋರ್ಸ್ ಟ್ರೈನಿಂಗ್ ಕಮಾಂಡ್ ಸೆಂಟರ್ಗೆ ರಸ್ತೆ ಮೂಲಕ ತೆರಳಿ ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸಲಿದ್ದಾರೆ. ನಂತರ ಬೆಂಗಳೂರು ಅಂತರಾಷ್ಟ್ರೀಯ ನಿಮಾನ ನಿಲ್ದಾಣ ಟರ್ಮಿನಲ್ 2 ಉದ್ಘಾಟನೆ, ಬೆಂಗಳೂರು ವಿಮಾನ ನಿಲ್ದಾಣದ ಆವರಣದಲ್ಲಿರುವ ನಾಡಪ್ರಭು ಕೆಂಪೇಗೌಡ ಕಂಚಿನ ಪ್ರತಿಮೆ ಅನಾವರಣ ನಡೆಯಲಿದೆ.
ಮಧ್ಯಾಹ್ನ 12-50ಕ್ಕೆ ಬೃಹತ್ ಸಾರ್ವಜನಿಕ ಸಮಾವೇಶದಲ್ಲಿ ಭಾಗಿಯಾಗಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಆಗಮನದ ಹಿನ್ನೆಲೆಯಲ್ಲಿ ನಗರದಲ್ಲಿ ಭದ್ರತೆಗಾಗಿ 4000 ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ರಸ್ತೆಗಳಲ್ಲಿ ಸಾರ್ವಜನಿಕರ ಓಡಾಟಕ್ಕೆ ನಿರ್ಬಂಧ ಹೇರಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.