ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಎರಡು ದಿನಗಳ ಒಡಿಶಾ ಪ್ರವಾಸದಲ್ಲಿದ್ದು, ಇಂದು ಭುವನೇಶ್ವರಕ್ಕೆ ಆಗಮಿಸಿದ ಅವರಿಗೆ ಅದ್ದೂರಿ ಸ್ವಾಗತ ನೀಡಲಾಯಿತು. ಒಡಿಶಾ ಅವರ ತವರು ರಾಜ್ಯವಾಗಿದೆ.
ವಿಮಾನ ನಿಲ್ದಾಣದಲ್ಲಿ ರಾಜ್ಯಪಾಲ ಗಣೇಶಿ ಲಾಲ್ ಮತ್ತು ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರನ್ನು ಬರಮಾಡಿಕೊಂಡರು. ನಂತರ ರಾಜ್ಯ ಸರ್ಕಾರದಿಂದ ಗೌರವ ರಕ್ಷೆಯನ್ನು ನೀಡಲಾಯಿತು. ಬಳಿಕ ವಾಯುಪಡೆಯ ಹೆಲಿಕಾಪ್ಟರ್ನಲ್ಲಿ ಪುರಿಗೆ ತೆರಳಿದರು.
ಅಲ್ಲಿ ಪ್ರಸಿದ್ಧ ಜಗನ್ನಾಥ ದೇವಾಲಯಕ್ಕೆ ಎರಡು ಕಿಲೋಮೀಟರ್ ಕಾಲ್ನಡಿಗೆಯಲ್ಲಿ ನಡೆದು ದೇವರ ದರ್ಶನ ಪಡೆದರು.
ರಾಜ್ಯದ ಮಯೂರ್ಭಂಜ್ ಜಿಲ್ಲೆಯವರಾದ ಮುರ್ಮು ಅವರು ಭುವನೇಶ್ವರದಲ್ಲಿರುವ ತಮ್ಮ ಶಾಲೆಗೆ ಭೇಟಿ ನೀಡಲಿದ್ದಾರೆ.
ಶುಕ್ರವಾರ ಇತರ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಜುಲೈನಲ್ಲಿ ರಾಷ್ಟ್ರಪತಿಯಾದ ಬಳಿಕ ಮುರ್ಮು ಅವರು ಒಡಿಶಾ ರಾಜ್ಯಕ್ಕೆ ನೀಡುತ್ತಿರುವ ಮೊದಲ ಭೇಟಿ ಇದಾಗಿದೆ.
ಅವರ ಆಗಮನದ ಹಿನ್ರಾನೆಲೆಯಲ್ಲಿ ರಾಜ್ಯ ಸರ್ಕಾರ ಈಗಾಗಲೇ ರಾಜ್ಯ ರಾಜಧಾನಿಯಲ್ಲಿನ ಎಲ್ಲಾ ಕಚೇರಿಗಳು, ಶಾಲಾ-ಕಾಲೇಜುಗಳಿಗೆ ಅರ್ಧ ದಿನ ರಜೆ ಘೋಷಿಸಿದೆ. ಪುರಿ ಮತ್ತು ಭುವನೇಶ್ವರದಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದೆ.
In a rare gesture, President Droupadi Murmu walked about two kilometers to seek the blessings of Lord Jagannath at Puri. Devotees greeted the President on her way to the temple. pic.twitter.com/b6C8IQQZnr
— President of India (@rashtrapatibhvn) November 10, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.