ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಇಂದು ನಡೆಸಿದ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯಲ್ಲಿ ವಿದೇಶಿ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಭಯೋತ್ಪಾದಕನನ್ನು ಜೈಷ್-ಎ-ಮೊಹಮ್ಮದ್ ಸಂಘಟನೆಯ ಕಾರ್ಯಕರ್ತ ಎಂದು ಗುರುತಿಸಲಾಗಿದೆ.
ಶೋಪಿಯಾನ್ನ ಕಪ್ರೆನ್ ಪ್ರದೇಶದಲ್ಲಿ ಭಯೋತ್ಪಾದಕರು ಅಡಗಿರುವ ಸುಳಿವಿನ ಮೇರೆಗೆ ಭದ್ರತಾ ಪಡೆಗಳು ಪೂರ್ವಭಾವಿ ಕಾರ್ಯಾಚರಣೆಯನ್ನು ಆರಂಭಿಸಿದವು. ಶೋಧನಾ ತಂಡದ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದು, ನಂತರ ಎನ್ಕೌಂಟರ್ ಆರಂಭವಾಗಿದೆ.
ಹತ್ಯೆಗೀಡಾದ ಭಯೋತ್ಪಾದಕನನ್ನು ಕಮ್ರಾನ್ ಭಾಯ್ ಅಲಿಯಾಸ್ ಹನೀಸ್ ಎಂದು ಗುರುತಿಸಲಾಗಿದ್ದು, ಈತ ಕುಲ್ಗಾಮ್-ಶೋಪಿಯಾನ್ ಪ್ರದೇಶದಲ್ಲಿ ಸಕ್ರಿಯನಾಗಿದ್ದ.
ಎನ್ಕೌಂಟರ್ ಸ್ಥಳದ ಸುತ್ತ ಶೋಧ ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
One FT of JeM #terror outfit killed, identified as Kamran Bhai @ Hanees who was active in #Kulgam–#Shopian area. Search is still going on: ADGP Kashmir@JmuKmrPolice https://t.co/v8P0CFkUrp
— Kashmir Zone Police (@KashmirPolice) November 11, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.