ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಇಂದು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನನಿಲ್ದಾಣದ ಟರ್ಮಿನಲ್ -2 ಅನ್ನು ಉದ್ಘಾಟಿಸಿದ್ದಾರೆ.
ಇದು ಏಷ್ಯಾ ಖಂಡದ ಮೊದಲ ಗಾರ್ಡನ್ ಟರ್ಮಿನಲ್-2 ಆಗಿದೆ. 2.55 ಲಕ್ಷ ಚದರ ಮೀಟರ್ ವಿಸ್ತೀರ್ಣದಲ್ಲಿರುವ ಟರ್ಮಿನಲ್ ನಿರ್ಮಾಣಕ್ಕೆ ರೂ 13,000 ಕೋಟಿ ವೆಚ್ಚ ಮಾಡಲಾಗಿದೆ. ವಾರ್ಷಿಕ 2.5 ಕೋಟಿ ಪ್ರಯಾಣಿಕರ ನಿರ್ವಹಣೆಯ ಸಾಮರ್ಥ್ಯ ಈ ಟರ್ಮಿನಲ್ಗೆ ಇದೆ.
ಮೊದಲನೇ ಟರ್ಮಿನಲ್ಗಿಂತ ಇಂದು ಉದ್ಘಾಟನೆಗೊಂಡ ಎರಡನೇ ಟರ್ಮಿನಲ್ ಅತ್ಯಾಧುನಿಕ ಸೌಲಭ್ಯಗಳಿಂದ ಕೂಡಿದ್ದು, ವಿವಿಧ ಅಲಂಕಾರಗಳಿಂದ ಪ್ರಯಾಣಿಕರನ್ನು ಆಕರ್ಷಿಸುತ್ತಿದೆ. ಪ್ರಕೃತಿ ಸೌಂದರ್ಯಕ್ಕೆ ಇಲ್ಲಿ ಒತ್ತು ನೀಡಲಾಗಿದ್ದು, ಜನರು ಕುಳಿತುಕೊಳ್ಳುವ ಸ್ಥಳದಲ್ಲಿ ಉದ್ಯಾನ ನಿರ್ಮಾಣ ಮಾಡಲಾಗಿದೆ. ಟರ್ಮಿನಲ್ನಲ್ಲಿ ನಡೆದಾಡಿದರೆ ಉದ್ಯಾನವನದಲ್ಲಿ ನಡೆದಾಡಿದ ಅನುಭವ ಸಿಗಲಿದೆ. ರಾಜ್ಯದ ಜಲಮೂಲಗಳನ್ನು, ನೈಸರ್ಗಿಕ ಅರಣ್ಯಗಳನ್ನು ಡಿಜಿಟಲ್ ಆಗಿ ತೋರಿಸುವ ವ್ಯವಸ್ಥೆಯನ್ನು ಇಲ್ಲಿ ಮಾಡಲಾಗಿದೆ.
2008ರಲ್ಲಿ ಕಾರ್ಯಾಚರಣೆ ಆರಂಭಿಸಿದ ಈ ವಿಮಾನನಿಲ್ದಾಣವು ದಕ್ಷಿಣ ಭಾರತದ ಅತ್ಯಂತ ಜನನಿಬಿಡ ವಿಮಾನನಿಲ್ದಾಣ ಎಂಬ ಖ್ಯಾತಿ ಗಳಿಸಿದೆ.
Karnataka | Prime Minister Narendra Modi inaugurates Terminal 2 of Kempegowda International Airport in Bengaluru pic.twitter.com/8HAmANf5SN
— ANI (@ANI) November 11, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.