ನವದೆಹಲಿ: ಹಿಮಾಚಲ ಪ್ರದೇಶದಲ್ಲಿ ನಾಳೆ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಸಕಲ ಸಿದ್ಧತೆ ನಡೆದಿದೆ. ರಾಜ್ಯದ 68 ಸ್ಥಾನಗಳಿಗೆ 24 ಮಹಿಳೆಯರು ಸೇರಿದಂತೆ ಒಟ್ಟು 412 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಬೆಳಗ್ಗೆ 8 ಗಂಟೆಗೆ ಆರಂಭವಾಗುವ ಮತದಾನ ಸಂಜೆ 5 ಗಂಟೆಗೆ ಮುಕ್ತಾಯವಾಗಲಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಮುಖ್ಯ ಚುನಾವಣಾಧಿಕಾರಿ ಮನೀಶ್ ಗಾರ್ಗ್, ರಾಜ್ಯದಲ್ಲಿ 157 ಸಂಪೂರ್ಣ ಮಹಿಳಾ ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಇಲ್ಲಿ ಮತಗಟ್ಟೆ ಅಧಿಕಾರಿಗಳು, ಸಿಬ್ಬಂದಿ ಮತ್ತು ಭದ್ರತಾ ಸಿಬ್ಬಂದಿ ಮಹಿಳೆಯರೇ ಇರುತ್ತಾರೆ ಎಂದಿದ್ದಾರೆ.
ಬಿಜೆಪಿ ಮತ್ತು ಕಾಂಗ್ರೆಸ್ ಎಲ್ಲಾ 68 ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದ್ದು, ಆಮ್ ಆದ್ಮಿ ಪಕ್ಷ 67 ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಇತರ ಪಕ್ಷಗಳ ಪೈಕಿ – ಸಿಪಿಐ(ಎಂ) 11 ಸ್ಥಾನ, ಬಿಎಸ್ಪಿ 53, ಸಿಪಿಐ 1, ಮತ್ತು ಇತರರು 45 ಸ್ಥಾನದಲ್ಲಿ ಸ್ಪರ್ಧಿಸಲಿದ್ದಾರೆ. ಸ್ವತಂತ್ರ ಅಭ್ಯರ್ಥಿಗಳ ಸಂಖ್ಯೆ 99 ಆಗಿದೆ.
ಈ ನಡುವೆ, ಹಿಮಾಚಲ ರಾಜ್ಯದಲ್ಲಿರುವ ಎಲ್ಲಾ ಸರ್ಕಾರಿ ಕಚೇರಿಗಳು, ಮಂಡಳಿಗಳು, ನಿಗಮಗಳು, ಶಿಕ್ಷಣ ಸಂಸ್ಥೆಗಳು ಮತ್ತು ಕೈಗಾರಿಕಾ ಸಂಸ್ಥೆಗಳಲ್ಲಿ ಕೆಲಸ ಮಾಡುವ ನೌಕರರು ತಮ್ಮ ಹಕ್ಕನ್ನು ಚಲಾಯಿಸಲು ಅನುಕೂಲವಾಗುವಂತೆ ನಾಳೆ ಸಾರ್ವಜನಿಕ ರಜೆ ಘೋಷಿಸಲಾಗಿದೆ. ದಿನಗೂಲಿ ನೌಕರರಿಗೆ ವೇತನ ಸಹಿತ ರಜೆ ಇದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.