ನವದೆಹಲಿ: ಹಿಮಾಚಲ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆಗೆ ಶನಿವಾರ ಮತದಾನ ಆರಂಭವಾಗಿದೆ. ಬೆಳಗ್ಗೆ 8 ಗಂಟೆಗೆ ಆರಂಭವಾದ ಮತದಾನ ಸಂಜೆ 5 ಗಂಟೆಯವರೆಗೆ ನಡೆಯಲಿದೆ. 68 ಸ್ಥಾನಗಳಿಗೆ 24 ಮಹಿಳೆಯರು ಸೇರಿದಂತೆ ಒಟ್ಟು 412 ಅಭ್ಯರ್ಥಿಗಳು ಕಣದಲ್ಲಿದ್ದಾರೆ.
ಪ್ರಮುಖ ಪೈಪೋಟಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಇರಲಿದ್ದು ಉಭಯ ಪಕ್ಷಗಳು ಗೆಲುವಿಗಾಗಿ ಅವಿರತ ಹೋರಾಟ ನಡೆಸಿವೆ.
ಆಮ್ ಆದ್ಮಿ ಪಕ್ಷ (ಎಎಪಿ) ಕೂಡ ರಾಜ್ಯದಲ್ಲಿ ನೆಲೆ ಸ್ಥಾಪಿಸಲು ಪ್ರಯತ್ನಿಸುತ್ತಿದೆ. ಬಿಜೆಪಿ ಮತ್ತು ಕಾಂಗ್ರೆಸ್ ಎಲ್ಲಾ ಸ್ಥಾನಗಳಲ್ಲಿ ಸ್ಪರ್ಧಿಸುತ್ತಿವೆ. ಆಮ್ ಆದ್ಮಿ ಪಕ್ಷ 67 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು, ಬಹುಜನ ಸಮಾಜ ಪಕ್ಷ 53, ಸಿಪಿಐ(ಎಂ) 11 ಮತ್ತು ಸಿಪಿಐ ಒಂದು ಸ್ಥಾನಕ್ಕೆ ಸ್ಪರ್ಧಿಸಿವೆ. ಇತರೆ ಪಕ್ಷಗಳು 45 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದ್ದು, 99 ಪಕ್ಷೇತರರೂ ಕಣದಲ್ಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.