ಬಂಟ್ವಾಳ : ಕಲ್ಲಡ್ಕ ಶ್ರೀರಾಮ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ಸೆಪ್ಟಂಬರ್ 15ರಂದು ‘ತುರ್ತುಪರಿಸ್ಥಿತಿ ಒಂದು ನೆನಪು ಮತ್ತು ಸಂದೇಶ’ ಎಂಬ ಮಂಗಳೂರು ವಿ.ವಿ.ಮಟ್ಟದ ವಿಚಾರ ಸಂಕಿರಣ ನಡೆಯಲಿದೆ.
ಕಾರ್ಯಕ್ರಮದ ಉದ್ಘಾಟಕರಾಗಿ ಕರ್ನಾಟಕ ವಿಧಾನಪರಿಷತ್ ಸಭಾಪತಿ ಡಿ.ಹೆಚ್.ಶಂಕರಮೂರ್ತಿ ಆಗಮಿಸಲಿದ್ದಾರೆ. ಬಳಿಕ ಇವರು ಎರಡನೇ ಅವಧಿಯಲ್ಲಿ ತುರ್ತುಪರಿಸ್ಥಿತಿ ವಿರುದ್ಧದ ಹೋರಾಟ, ಪ್ರೇರಣೆ, ಪರಿಣಾಮ ಎಂಬ ವಿಷಯದ ಬಗ್ಗೆ ಮಾತನಾಡಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀರಾಮ ವಿದ್ಯಾಕೇಂದ್ರದ ಅಧ್ಯಕ್ಷರಾದ ನಾರಾಯಣ ಸೋಮಯಾಜಿ ವಹಿಸಲಿರುವರು. ರಾ.ಸ್ವ. ಸಂಘದ ಹಿರಿಯ ಪ್ರಚಾರಕ ಸು. ರಾಮಣ್ಣ ಪ್ರಾಸ್ತಾವಿಕ ಮಾತುಗಳನ್ನಾಡಲಿರುವರು.
ಸಂವಾದ ಕಾರ್ಯಕ್ರಮದಲ್ಲಿ ಸುಂಪ್ರೀಂಕೋರ್ಟಿನ ವಿಶ್ರಾಂತ ನ್ಯಾಯವಾದಿ ಹೆಬ್ರಿ ಬಾಲಕೃಷ್ಣ ಮಲ್ಯ, ಹಿರಿಯ ಪತ್ರಕರ್ತ ದು.ಗು.ಲಕ್ಷ್ಮಣ, ಹಾಗೂ ಸಂಸ್ಥೆಯ ಸಂಚಾಲಕ ಡಾ|| ಪ್ರಭಾಕರ ಭಟ್ ಕಲ್ಲಡ್ಕ, ಉಪಸ್ಥಿತರಿರುವರು.
ಕಾರ್ಯಕ್ರಮದ ಸಮಾರೋಪ ಭಾಷಣವನ್ನು ರಾ.ಸ್ವ. ಸಂಘದ ಹಿರಿಯ ಪ್ರಚಾರಕ ಸು. ರಾಮಣ್ಣ ಮತ್ತು ಸಮಾರೋಪದ ಅಧ್ಯಕ್ಷರಾಗಿ ಮಂಗಳೂರು ವಿಶ್ವವಿದ್ಯಾನಿಲಯದ ರಾಜ್ಯಶಾಸ್ತ್ರ ಪ್ರಾಧ್ಯಾಪಕ ಡಾ| ಪಿ.ಎಲ್.ಧರ್ಮ ವಹಿಸಲಿರುವರು. ಈ ಸಂದರ್ಭದಲ್ಲಿ ತುರ್ತುಪರಿಸ್ಥಿತಿಯ ಸಂದರ್ಭದ ಅಪರೂಪದ ಹಿನ್ನೆಲೆ, ಭಾವಚಿತ್ರ ಇನ್ನಿತರ ಮಾಹಿತಿಗಳ ಪ್ರದರ್ಶಿನಿಯು ಬೆಳಗ್ಗೆ ಘಂಟೆ 9.00ಕ್ಕೆ ಉದ್ಘಾಟನೆಗೊಳ್ಳಲಿದೆ.
ಮಂಗಳೂರು, ಉಡುಪಿ, ಕೊಡಗು ಹಾಗೂ ಕಾಸರಗೋಡು ಜಿಲ್ಲೆಯಲ್ಲಿ ತುರ್ತು ಪರಿಸ್ಥಿತಿ ಸಂದರ್ಭ ಸತ್ಯಾಗ್ರಹದಲ್ಲಿ ಭಾಗವಹಿಸಿದ, ಮೀಸಾ ಬಂದಿಗಳಾಗಿದ್ದ ಸುಮಾರು 200 ಕ್ಕಿಂತಲೂ ಹೆಚ್ಚು ಮಂದಿ ಭಾಗವಹಿಸಲಿರುವರು. ಮಂಗಳೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯ ಪದವಿ ಕಾಲೇಜುಗಳ ಸುಮಾರು 500 ಕ್ಕಿಂತಲೂ ಹೆಚ್ಚು ಮಂದಿ ವಿದ್ಯಾರ್ಥಿಗಳು, ಅಧ್ಯಾಪಕರು ಮತ್ತು ಪ್ರಮುಖರು, ಆಸಕ್ತರು ಭಾಗವಹಿಸಲಿರುವರು ಎಂದು ಕಾಲೇಜಿನ ಪ್ರಾಂಶುಪಾಲ ಕೃಷ್ಣಪ್ರಸಾದ ಕಾಯರ್ಕಟ್ಟೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.