ಬೆಂಗಳೂರು : ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ನಾಡ ಪ್ರಭು ಕೆಂಪೇಗೌಡರ ಹೆಸರು ಇಡುವ ವಿಚಾರದಲ್ಲಿಯೂ ರಾಜಕೀಯ ಮಾಡುತ್ತಿರುವ ವಿಪಕ್ಷ ನಾಯಕ ಸಿದ್ದರಾಮಯ್ಯರಿಗೆ ಬಿಜೆಪಿ ದಾಖಲೆ ಬಿಡುಗಡೆ ಮಾಡಿ ತಿರುಗೇಟು ನೀಡಿದೆ.
ಇಂದು ಪ್ರಧಾನಿ ನರೇಂದ್ರ ಮೋದಿಯವರು ಕರ್ನಾಟಕಕ್ಕೆ ಭೇಟಿ ನೀಡಿ, ಕೆಂಪೇಗೌಡ ವಿಮಾನ ನಿಲ್ದಾಣದ ಎರಡನೇ ಟರ್ಮಿನಲ್ ಉದ್ಘಾಟನೆ ಮಾಡಿದ್ದಾರೆ. ಇದರ ಬೆನ್ನಲ್ಲೇ ಈ ವಿಚಾರದಲ್ಲಿಯೂ ರಾಜಕೀಯ ಮಾಡುತ್ತಿರುವ ಕಾಂಗ್ರೆಸ್ ನಾಯಕರಿಗೆ ಬಿಜೆಪಿ ಪ್ರತ್ಯುತ್ತರ ನೀಡಿದೆ.
ಹುಟ್ಟುವ ಮಗುವಿಗೆಲ್ಲಾ ನಾಮಕರಣ ಮಾಡಿದ್ದು ನಾನೇ ಎನ್ನುವಂತೆ ಹೇಳಿಕೊಳ್ಳುವ ಸಿದ್ದರಾಮಯ್ಯನವರೇ, ಏರ್ಪೋಟ್’ಗೆ ನಾಡ ಪ್ರಭು ಕೆಂಪೇಗೌಡರ ಹೆಸರು ಇಡುವ ತೀರ್ಮಾನ ಮಾಡಿದ್ದು ಬಿಜೆಪಿ ಸರ್ಕಾರ. ಯಡಿಯೂರಪ್ಪನವರ ನೇತೃತ್ವದ ಬಿಜೆಪಿ ಸರ್ಕಾರ ಫೆಬ್ರವರಿ 27, 2009 ರಲ್ಲಿಯೇ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಅಲ್ಲದೇ 2011 ಮಾರ್ಚ್ 4 ರಂದು ಸದನದಲ್ಲಿ ಘೋಷಣೆ ಮಾಡಿ, ಮಾರ್ಚ್ 7 ರಂದು ರಾಜ್ಯ ಸಚಿವ ಸಂಪುಟದಲ್ಲಿ ಆದೇಶ ಮಾಡಿತ್ತು.
ಆದರೆ, ಕೆಂಪೇಗೌಡರ ಹೆಸರನ್ನು ಏರ್ಪೋಟ್’ಗೆ ಇಡಬೇಕೊ? ಬೇಡವೊ ಎಂದು ತೀರ್ಮಾನ ಮಾಡಲು ಅಂದಿನ ಯುಪಿ ಸರ್ಕಾರ 4 ವರ್ಷ ತೆಗೆದುಕೊಂಡಿತ್ತು.
ಇದೀಗ ಟಿವಿ ಕ್ಯಾಮರಾ ಮುಂದೆ ಬಂದು ಒಳ್ಳೆಯದಕ್ಕೆಲ್ಲಾ ನಾನೇ ಕಾರಣ ಎನ್ನುವ ಸಿದ್ದರಾಮಯ್ಯರೇ, ಬಿಜೆಪಿ ಸರ್ಕಾರ ತೆಗೆದುಕೊಂಡ ನಿರ್ಧಾರಕ್ಕೆ ನಾಲ್ಕು ವರ್ಷ ನಿಮ್ಮ ಯುಪಿಎ ಸರ್ಕಾರ ಕಾಯಿಸಿದ್ದು ಯಾಕೆ ? ರಾಜ್ಯದ ಜನತೆಗೆ ಉತ್ತರ ಹೇಳಿ. ಉತ್ತರ ಇದೆಯೆ ಸುಳ್ಳುರಾಮಯ್ಯ ಎಂದು ಬಿಜೆಪಿ ಪ್ರಶ್ನೆ ಮಾಡಿದೆ.
https://twitter.com/BJP4Karnataka/status/1591077138966663168
ಹುಟ್ಟುವ ಮಗುವಿಗೆಲ್ಲಾ ನಾಮಕರಣ ಮಾಡಿದ್ದು ನಾನೇ ಎನ್ನುವಂತೆ ಹೇಳಿಕೊಳ್ಳುವ @siddaramaiah ನವರೇ…
ಬೆಂಗಳೂರು ಏರ್ಪೋಟ್'ಗೆ ನಾಡ ಪ್ರಭು ಕೆಂಪೇಗೌಡರ ಹೆಸರು ಇಡುವ ತೀರ್ಮಾನ ಮಾಡಿದ್ದು ಅಂದಿನ ಬಿಜೆಪಿ ಸರ್ಕಾರ. 27 ಫೆಬ್ರವರಿ 2009 ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು ಅಂದಿನ ಮುಖ್ಯಮಂತ್ರಿ @BSYBJP ನೇತೃತ್ವದ ಬಿಜೆಪಿ ಸರ್ಕಾರ.
1/7— Basavaraj S Bommai (@BSBommai) November 11, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.