ಬೆಂಗಳೂರು: ಕರ್ನಾಟಕವು ಪ್ರಧಾನಮಂತ್ರಿ ಭಾರತೀಯ ಜನೌಷಧಿ ಪರಿಯೋಜನೆ ಜಾರಿಯಲ್ಲಿ ದೇಶದಲ್ಲೇ ಎರಡನೇ ಸ್ಥಾನವನ್ನು ಪಡೆದುಕೊಂಡಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.
ಮೊದಲ ಸ್ಥಾನದಲ್ಲಿ ಉತ್ತರಪ್ರದೇಶ ಇದ್ದರೆ, ಎರಡನೇ ಸ್ಥಾನದಲ್ಲಿ ಕರ್ನಾಟಕ ಮತ್ತು ಮೂರನೇ ಸ್ಥಾನದಲ್ಲಿ ಕೇರಳ ರಾಜ್ಯ ಇದೆ.
ಇದುವರೆಗೆ ರಾಜ್ಯದಲ್ಲಿ 1052 ಜನೌಷಧಿ ಮಳಿಗೆಗಳನ್ನು ತೆರೆಯಲಾಗಿದೆ. ಹೊಸದಾಗಿ ಮತ್ತೆ 500 ಮಳಿಗೆಗಳನ್ನು ತೆರೆಯುವ ಉದ್ದೇಶ ಹೊಂದಲಾಗಿದ್ದು, ಸರ್ಕಾರಿ ಆಸ್ಪತ್ರೆಗಳಲ್ಲಿ ಸುಮಾರು 40 ಹೊಸ ಮಳಿಗೆಗಳಿಗೆ ಅನುಮತಿ ನೀಡುವಂತೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದಿದ್ದಾರೆ.
ರಾಜ್ಯದಲ್ಲಿ ಬಡ ಹಿಂದುಳಿದ ಮತ್ತು ಮಧ್ಯಮ ವರ್ಗದವರಿಗೆ ರಿಯಾಯಿತಿ ದರದಲ್ಲಿ ಔಷಧಗಳು ಮತ್ತು ಶಸ್ತ್ರಚಿಕಿತ್ಸೆಯ ಪರಿಕರಗಳನ್ನು ಒದಗಿಸುವ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಪರಿಯೋಜನೆ ರಾಜ್ಯದಲ್ಲಿ ಅತ್ಯುತ್ತಮವಾಗಿ ಅನುಷ್ಠಾನದಲ್ಲಿದೆ ಎಂದಿದ್ದಾರೆ.
“ಜನೌಷಧಿ ಮಳಿಗೆಗಳಿಂದ ಬಿಪಿಎಲ್ ಮತ್ತು ಬಡವರ್ಗದವರಿಗೆ ಹೆಚ್ಚಿನ ಅನುಕೂಲವಾಗುತ್ತಿದೆ. ಆರೋಗ್ಯಕ್ಕಾಗಿ ಮಾಡುವ ವೆಚ್ಚ ಗಣನೀಯ ಕಡಿಮೆಯಾಗಿದೆ. ಈ ವರ್ಷ 300ಕ್ಕೂ ಹೆಚ್ಚು ಮಳಿಗೆಗಳನ್ನು ತೆರೆದ ಉತ್ತಮ ಸಾಧನೆ ಮಾಡಿದ್ದೇವೆ” ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.