ಹೈದರಾಬಾದ್: ಹೈದರಾಬಾದ್ ಕಾನೂನು ಕಾಲೇಜಿನ ಹಾಸ್ಟೆಲ್ ಕೊಠಡಿಯಲ್ಲಿ ವಿದ್ಯಾರ್ಥಿಗಳ ಗುಂಪೊಂದು ಕಾನೂನು ವಿದ್ಯಾರ್ಥಿಯನ್ನು ಥಳಿಸಿ ಅಲ್ಲಾಹು ಅಕ್ಬರ್ ಘೋಷಣೆಗಳನ್ನು ಕೂಗುವಂತೆ ಒತ್ತಾಯಿಸಿದ ಘಟನೆಯ ವಿಡಿಯೋ ವೈರಲ್ ಆಗಿದ್ದು, ಇದೀಗ ಘಟನೆಗೆ ಸಂಬಂಧಿಸಿದಂತೆ ಐದು ಮಂದಿಯನ್ನು ಬಂಧನಕ್ಕೆ ಒಳಪಡಿಸಲಾಗಿದೆ.
ಹೈದರಾಬಾದಿನ ಐಸಿಎಫ್ಎಐ ಫೌಂಡೇಶನ್ ಫಾರ್ ಹೈಯರ್ ಎಜುಕೇಶನ್ (ಐಎಫ್ಹೆಚ್ಇ)ನಲ್ಲಿ ಮೂರನೇ ವರ್ಷದ ವಿದ್ಯಾರ್ಥಿ ಹಿಮಾಂಕ್ ಬನ್ಸಾಲ್ ಎಂಬಾತನಿಗೆ ಕಪಾಳಮೋಕ್ಷ ಮಾಡಿ, ಒದ್ದು, ಆತನ ಕೈಗಳನ್ನು ತಿರುಚಿ ಅಮಾನುಷ ರೀತಿಯಲ್ಲಿ ಚಿತ್ರಹಿಂಸೆ ನೀಡಿದ ದೃಶ್ಯ ವಿಡಿಯೋದಲ್ಲಿ ರೆಕಾರ್ಡ್ ಆಗಿತ್ತು. ಆರೋಪಿಗಳು ಆತನಿಗೆ “ಅಲ್ಲಾಹು ಅಕ್ಬರ್” ಘೋಷಣೆಗಳನ್ನು ಹೇಳುವಂಎ ಪೀಡಿಸಿದ್ದಾರೆ.
“ನಾವು ಅವನ ಸಿದ್ಧಾಂತವನ್ನು ಸರಿಪಡಿಸಲು ಬಯಸುತ್ತೇವೆ. ನಾವು ಅವನನ್ನು ಕೋಮಾಕ್ಕೆ ಕಳುಹಿಸುತ್ತೇವೆ, ಅವನು ಹೊಸ ಜಗತ್ತನ್ನು ನೆನಪಿಸಿಕೊಳ್ಳಬೇಕು” ಎಂದು ಆರೋಪಿಯೊಬ್ಬ ವಿಡಿಯೋದಲ್ಲಿ ಹೇಳುವುದನ್ನು ಕೇಳಬಹುದು. ವಿದ್ಯಾರ್ಥಿಯ ಪರ್ಸ್ ಅನ್ನೂ ಆರೋಪಿಗಳು ಎಗರಿಸಿದ್ದಾರೆ.
ಕೊಲೆ ಯತ್ನದ ಆರೋಪದ ಮೇಲೆ ಅಪ್ರಾಪ್ತ ವಯಸ್ಕ ಸೇರಿದಂತೆ ಒಟ್ಟು 12 ವಿದ್ಯಾರ್ಥಿಗಳ ಪೈಕಿ ಎಂಟು ಮಂದಿಯನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಉಳಿದ ಏಳು ಮಂದಿ ಪರಾರಿಯಾಗಿದ್ದಾರೆ. ಇವರೆಲ್ಲರನ್ನೂ ಬಿಸಿನೆಸ್ ಸ್ಕೂಲ್ ಅಮಾನತುಗೊಳಿಸಿದೆ. ಕಾಲೇಜಿನ ಆಡಳಿತ ಮಂಡಳಿಯ ಐವರಿಗೆ ಪೊಲೀಸರ ಮುಂದೆ ಹಾಜರಾಗುವಂತೆ ಆದೇಶ ನೀಡಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.