ಕಲಬುರಗಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಕಲಬುರಗಿ ತಾಲ್ಲೂಕಿನ ಮಡಿಹಾಳ ತಾಂಡದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಆಯೋಜಿಸಿದ್ದ ವಿವೇಕ ಶಾಲಾ ಕೊಠಡಿಗಳ ಯೋಜನೆಗೆ ಚಾಲನೆ ನೀಡಿದರು. ಈ ಯೋಜನೆಯಡಿ ರಾಜ್ಯಾದ್ಯಂತ ಸರ್ಕಾರ ಸುಮಾರು 8,000 ಶಾಲಾ ಕೊಠಡಿಗಳನ್ನು ನಿರ್ಮಿಸಲಿದೆ.
“ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗಾಗಿ ರಾಜ್ಯಾದ್ಯಂತ ವಿವೇಕ ಹೆಸರಿನ ಶಾಲಾ ಕೊಠಡಿಗಳ ನಿರ್ಮಾಣ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗುವುದು” ಎಂದು ಈ ವೇಳೆ ಸಿಎಂ ಹೇಳಿದ್ದಾರೆ.
“ಇದು ಸದಾ ಕಾಲ ನೆನಪಿಡುವ ದಿನವಾಗಿದೆ. ಮಕ್ಕಳಿಗೆ ಮೂಲ ಸೌಕರ್ಯ ಒದಗಿಸುವ ಮಹತ್ವದ ಕೆಲಸಕ್ಕೆ ನಾವು ಮುಂದಾಗಿದ್ದೇವೆ. ಕರ್ನಾಟಕ ಉದಯವಾದ ಮೇಲೆ ಒಂದೇ ವರ್ಷದಲ್ಲಿ ಇಷ್ಟೊಂದು ಕೊಠಡಿ ನಿರ್ಮಿಸುವ ಕೆಲಸ ಎಂದಿಗೂ ನಡೆದಿರಲಿಲ್ಲ. ಆದರೆ, ನಮ್ಮ ಸರ್ಕಾರವು ಒಂದೇ ಬಾರಿಗೆ 7,601 ಕೊಠಡಿ ನಿರ್ಮಿಸಲು ಮುಂದಾಗಿದೆ. ಇದೊಂದು ದಾಖಲೆ” ಎಂದಿದ್ದಾರೆ.
ಮುಂದಿನ ದಿನಗಳಲ್ಲಿ ಎರಡು ಸಾವಿರ ಕೊಠಡಿಗಳನ್ನು ಕಲ್ಯಾಣ ಕರ್ನಾಟಕ ಭಾಗದಲ್ಲಿ ನಿರ್ಮಿಸಲಿದ್ದೇವೆ. ನಾಡಿನ ಕಟ್ಟಕಡೆಯ ವ್ಯಕ್ತಿಯ ಮಕ್ಕಳಿಗೂ ಶಿಕ್ಷಣ ಸಿಗುವಂತಾಗಲು ನಾವು ಶ್ರಮಿಸುತ್ತೇವೆ ಎಂದರು.
ಮುಖ್ಯಮಂತ್ರಿ @BSBommai ಅವರು ಇಂದು ಕಲಬುರಗಿ ತಾಲ್ಲೂಕಿನ ಮಡಿಹಾಳ ತಾಂಡದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಆಯೋಜಿಸಿದ್ದ ವಿವೇಕ ಶಾಲಾ ಕೊಠಡಿಗಳ ಯೋಜನೆಯ ಶಂಕುಸ್ಥಾಪನೆ ನೆರವೇರಿಸಿದರು.
1/2 pic.twitter.com/2sOZdpTWNt— CM of Karnataka (@CMofKarnataka) November 14, 2022
"ಸರ್ಕಾರಿ ಶಾಲೆಗಳ ಮೂಲಸೌಕರ್ಯ ಅಭಿವೃದ್ದಿ ನಿಟ್ಟಿನಲ್ಲಿ ಇಂದು ರಾಜ್ಯಾದ್ಯಂತ 8100 "ವಿವೇಕ"ಶಾಲಾ ಕೊಠಡಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಾಗುವುದು."ಮುಖ್ಯಮಂತ್ರಿ: @BSBommai pic.twitter.com/P8Mz2CcQSJ
— CM of Karnataka (@CMofKarnataka) November 14, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.