ಮಂಗಳೂರು: ಹಲವು ವರ್ಷಗಳಿಂದ ಭಾರೀ ವಿರೋಧ, ಪ್ರತಿಭಟನೆಗಳಿಗೆ ಕಾರಣವಾಗಿದ್ದ ಸುರತ್ಕಲ್ನ ಟೋಲ್ ಗೇಟ್ ಅನ್ನು ಕೊನೆಗೂ ರದ್ದು ಮಾಡಲಾಗಿದೆ. ಈ ಬಗ್ಗೆ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಇಂದು ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.
ಟ್ವೀಟ್ ಮಾಡಿರುವ ಸಂಸದರು, “ಮಂಗಳೂರಿನ ಸುರತ್ಕಲ್ ಸಮೀಪದ ಟೋಲ್ ಸಂಗ್ರಹ ಕೇಂದ್ರ ರದ್ದಾಗಿದ್ದು, ನಮ್ಮ ಮನವಿಗೆ ಸೂಕ್ತವಾಗಿ ಸ್ಪಂದಿಸಿದ ಕೇಂದ್ರ ಸಚಿವರಾದ ಶ್ರೀ ನಿತಿನ್ ಗಡ್ಕರಿ ಮತ್ತು
ಪ್ರಧಾನಿ ನರೇಂದ್ರ ಮೋದಿ ಅವರಿಗೆ ನಾಗರಿಕರ ಪರವಾಗಿ ಧನ್ಯವಾದಗಳು” ಎಂದಿದ್ದಾರೆ.
ಟೋಲ್ ರದ್ದು ಮಾಡುವ ಭರವಸೆಯನ್ನು ಈ ಮೊದಲೇ ಕೇಂದ್ರ ಸಚಿವರು ನೀಡಿದ್ದು, ಈಗ ತಾಂತ್ರಿಕ ಅಂಶ ಪೂರೈಸಲಾಗಿದೆ ಎಂದಿದ್ದಾರೆ.
ಮಂಗಳೂರಿನ ಸುರತ್ಕಲ್ ಸಮೀಪದ ಟೋಲ್ ಸಂಗ್ರಹ ಕೇಂದ್ರ ರದ್ದಾಗಿದ್ದು, ನಮ್ಮ ಮನವಿಗೆ ಸೂಕ್ತವಾಗಿ ಸ್ಪಂದಿಸಿದ ಕೇಂದ್ರ ಸಚಿವರಾದ ಶ್ರೀ @nitin_gadkari ಹಾಗೂ ಪ್ರಧಾನಿ ಶ್ರೀ @narendramodi ಅವರಿಗೆ ನಾಗರಿಕರ ಪರವಾಗಿ ಧನ್ಯವಾದಗಳು.
ಟೋಲ್ ರದ್ದು ಮಾಡುವ ಭರವಸೆಯನ್ನು ಈ ಮೊದಲೇ ಕೇಂದ್ರ ಸಚಿವರು ನೀಡಿದ್ದು, ಈಗ ತಾಂತ್ರಿಕ ಅಂಶ ಪೂರೈಸಲಾಗಿದೆ.
— Nalinkumar Kateel (@nalinkateel) November 14, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.